Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 15 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 15 ಜನವರಿ 2027

ಶುಕ್ರವಾರ · ಸಾಮಾನ್ಯ ಕಾಲದ ಮೊದಲನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಮೊದಲನೆಯ ವಾರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ಹಸಿರು

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 4:1–5, 11

1ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ. 2ಇಸ್ರಾಯೇಲ್ಯರಿಗೆ ದೇವರ ವಿಶ್ರಾಂತಿಯ ಶುಭವರ್ತಮಾನವು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು. ಆದರೆ ಆ ಕಾಲದಲ್ಲಿ ಕೇಳಿದವರ ನಂಬಿಕೆಯೊಂದಿಗೆ ಇವರು ಪಾಲುಗಾರರಾಗದ ಕಾರಣ ಆ ಸಂದೇಶದಿಂದ ಅವರಿಗೆ ಪ್ರಯೋಜನವಾಗಲಿಲ್ಲ. 3ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ. 4ಎಲ್ಲಿಯೋ ಒಂದು ಕಡೆ ಏಳನೆಯ ದಿನವನ್ನು ಕುರಿತಾಗಿ, “ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂದು” ಬರೆದದೆ. 5“ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲವೆಂದು” ಎಂದು ಭಾಗದಲ್ಲಿ ಆತನು ಪುನಃ ಹೇಳಿದ್ದಾನೆ. 11ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.

ಪ್ರತಿವಚನ ಕೀರ್ತನೆ

ಕೀರ್ತ 78:3–4, 6–8

3ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ, 4ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು. 6ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು. 7ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ, 8ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.

ಸುವಾರ್ತೆ

ಮಾರ್ಕ 2:1–12

1ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು. 2ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. 3ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. 4ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. 5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. 6ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; 7“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. 8ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? 9ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? 10ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ 11“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು. 12ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು