Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 16 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 16 ಜನವರಿ 2027

ಶನಿವಾರ · ಸಾಮಾನ್ಯ ಕಾಲದ ಮೊದಲನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಮೊದಲನೆಯ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 4:12–16

12ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. 13ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ. 14ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ. 15ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ. 16ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

ಪ್ರತಿವಚನ ಕೀರ್ತನೆ

ಕೀರ್ತ 19:7–9, 14

7ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. 8ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. 9ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. 14ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

ಸುವಾರ್ತೆ

ಮಾರ್ಕ 2:13–17

13ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು. 14ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. 15ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು. 16ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. 17ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು