Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 16 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 3 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 16 ಜನವರಿ 2027

ಶನಿವಾರ · ಪಂಚಾಶತ್ತಮದ ನಂತರದ 33ನೇ ವಾರ · ಸ್ವರ 7

ಹಬ್ಬಗಳು ಮತ್ತು ಸಂತರು

ದೇವಪ್ರತ್ಯಕ್ಷತೆಗೆ ಮುಂಚಿನ ಶನಿವಾರ

ಕ್ರಿಸ್ಮಸ್ ಕಾಲ (ಸ್ವ್ಯಾತ್ಕಿ)

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ (ದೇವಪ್ರತ್ಯಕ್ಷತೆಗೆ ಮುಂಚಿನ ಶನಿವಾರ)

1 ತಿಮೊ 3:14–4:5

14ಬೇಗನೆ ನಿನ್ನ ಬಳಿಗೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. 15ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. 16ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು. 4:1ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. 2ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು, 3ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು. 4ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. 5ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.

ಸುವಾರ್ತೆ (ದೇವಪ್ರತ್ಯಕ್ಷತೆಗೆ ಮುಂಚಿನ ಶನಿವಾರ)

ಮತ್ತಾ 3:1–11

1ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನೆಂಬುವವನು ಯೂದಾಯದ ಅಡವಿಯಲ್ಲಿ ಬೋಧನೆ ಮಾಡುತ್ತಾ, 2ಹೇಳಿದ್ದೇನೆಂದರೆ, “ಪಶ್ಚಾತ್ತಾಪಪಡಿರಿ; ಏಕೆಂದರೆ ಪರಲೋಕ ರಾಜ್ಯವು ಸಮೀಪಿಸುತ್ತಿದೆ.” 3“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಮಾರ್ಗವನ್ನು ಸರಾಗ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವಿದೆ” ಎಂಬುದಾಗಿ ಪ್ರವಾದಿಯಾದ ಯೆಶಾಯನಿಂದ ಸೂಚಿತನಾದವನು ಇವನೇ. 4ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಿತ್ತು, ಅವನು ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆ ಮತ್ತು ಕಾಡುಜೇನು ಅವನ ಆಹಾರವಾಗಿತ್ತು. 5ಆಗ ಯೆರೂಸಲೇಮಿನವರು, ಎಲ್ಲಾ ಯೂದಾಯದವರೂ ಮತ್ತು ಯೊರ್ದನ್ ಹೊಳೆಯ ಸುತ್ತಲಿರುವ ಎಲ್ಲಾ ಸೀಮೆಯ ಜನರು ಅವನ ಬಳಿಗೆ ಹೊರಟು ಬಂದು, 6ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. 7ಆದರೆ ಯೋಹಾನನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುವುದಕ್ಕೆ ಬರುವುದನ್ನು ಕಂಡು ಅವರಿಗೆ, “ಎಲೈ ಸರ್ಪಸಂತತಿಯವರೇ, ಮುಂದೆ ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಚ್ಚರಿಸಿದವರಾರು? 8ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ. 9ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ. 10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು. 11ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 3 ಜನವರಿ ಎಂದರೆ ನಾಗರಿಕ ಪಂಚಾಂಗದ 16 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು