Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 17 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 4 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಜನವರಿ 2027

ಭಾನುವಾರ · ಸ್ವರ 8

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 33ನೇ ಭಾನುವಾರ

ದೇವಪ್ರತ್ಯಕ್ಷತೆಗೆ ಮುಂಚಿನ ಭಾನುವಾರ

ಕ್ರಿಸ್ಮಸ್ ಕಾಲ (ಸ್ವ್ಯಾತ್ಕಿ)

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ 11ನೇ ಸುವಾರ್ತೆ

ಯೋಹಾ 21:15–25

15ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?” ಎಂದು ಕೇಳಲು ಅವನು “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ” ಎಂದನು. ಆತನು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು” ಎಂದು ಹೇಳಿದನು. 16ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು. 17ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು. 18“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು” ಎಂದು ಹೇಳಿದನು. 19ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 20ಪೇತ್ರನು ಹಿಂತಿರುಗಿ ನೋಡಿದಾಗ, ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. ಆ ಶಿಷ್ಯನು ಊಟದ ಸಮಯದಲ್ಲಿ ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದವನೇ. 21ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, 22ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದನು. 24ಈ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಇವನೇ. ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು. 25ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಪತ್ರಿಕೆ (ದೇವಪ್ರತ್ಯಕ್ಷತೆಗೆ ಮುಂಚಿನ ಭಾನುವಾರ)

2 ತಿಮೊ 4:5–8

5ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು. 6ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ. 7ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ. 8ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಸುವಾರ್ತೆ (ದೇವಪ್ರತ್ಯಕ್ಷತೆಗೆ ಮುಂಚಿನ ಭಾನುವಾರ)

ಮಾರ್ಕ 1:1–8

1ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು. 2ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.” 3“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ. 4ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು. 5ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು. 6ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು. 7ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. 8ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಜನವರಿ ಎಂದರೆ ನಾಗರಿಕ ಪಂಚಾಂಗದ 17 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು