ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 18 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಜನವರಿ 2027
ಸೋಮವಾರ · ಸಾಮಾನ್ಯ ಕಾಲದ ಎರಡನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಎರಡನೆಯ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು. 2ತಾನೂ ಸಹ ಬಲಹೀನನಾಗಿರುವುದರಿಂದ ಅವನು ಅಜ್ಞಾನಿಗಳಿಗೂ ಮತ್ತು ಮಾರ್ಗತಪ್ಪಿದವರಿಗೂ ದಯಾಪರನಾಗಿ ನಡೆದುಕೊಳ್ಳುವುದಕ್ಕೆ ಶಕ್ತನಾಗಿರುವನು. 3ಆದ್ದರಿಂದ, ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣೆಗಾಗಿ ಯಜ್ಞಗಳನ್ನು ಸಮರ್ಪಿಸಬೇಕು. 4ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ. 5ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು. 6ಆತನು ಇನ್ನೊಂದು ಕಡೆಯಲ್ಲಿ, “ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನು” ಎಂದು ಹೇಳುತ್ತಾನೆ. 7ಕ್ರಿಸ್ತನು ತಾನೇ ಭೂಲೋಕದಲ್ಲಿ ಮನುಷ್ಯನಾಗಿ ಜೀವಿಸಿದ್ದ ಕಾಲದಲ್ಲಿ, ಮರಣದಿಂದ ತಪ್ಪಿಸಿ ಕಾಪಾಡಲು ಶಕ್ತನಾಗಿರುವಾತನಿಗೆ ಗಟ್ಟಿಯಾಗಿ ಮೊರೆಯಿಡುತ್ತಾ, ಕಣ್ಣೀರನ್ನು ಸುರಿಸುತ್ತಾ, ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿದನು. ದೇವರ ಮೇಲಣ ಭಯಭಕ್ತಿಯ ನಿಮಿತ್ತ ಆತನ ಪ್ರಾರ್ಥನೆಯನ್ನು ದೇವರು ಕೇಳಿದನು. 8ಹೀಗೆ ಆತನು ಮಗನಾಗಿದ್ದರೂ ತಾನು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು. 9ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು. 10ಅಲ್ಲದೆ ಆತನು ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ದೇವರಿಂದ ನೇಮಿಸಲ್ಪಟ್ಟನು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. 2ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. 3ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು. 4“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.
ಸುವಾರ್ತೆ
18ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. 19ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು. 20ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. 21“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. 22ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು