Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 20 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಜನವರಿ 2027

ಬುಧವಾರ · ಸಾಮಾನ್ಯ ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಎರಡನೆಯ ವಾರದ ಬುಧವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ಫೇಬಿಯನ್, ಪೋಪ್ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ

ಸಂತ ಸೆಬಾಸ್ಟಿಯನ್, ಹುತಾತ್ಮ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 7:1–3, 15–17

1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು. 2ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ. 3ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು. 15ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ. 17ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ.

ಪ್ರತಿವಚನ ಕೀರ್ತನೆ

ಕೀರ್ತ 110:1–4

1ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು. 2ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು. 3ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು. 4“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

ಸುವಾರ್ತೆ

ಮಾರ್ಕ 3:1–6

1ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು. 2ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು. 3ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು. 4ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು. 5ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು. 6ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು