ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 20 ಜನವರಿ
ಆರ್ಥೊಡಾಕ್ಸ್ ಪಂಚಾಂಗ · ಜನವರಿ 7 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಜನವರಿ 2027
ಬುಧವಾರ · ಪಂಚಾಶತ್ತಮದ ನಂತರದ 34ನೇ ವಾರ · ಸ್ವರ 8
ಹಬ್ಬಗಳು ಮತ್ತು ಸಂತರು
Afterfeast of the Theophany
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ (ಮುಂದೂತ)
1ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು; 2“ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು. 3ಅವನು; “ನೀವು ಏನನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡಿರಿ” ಎಂದು ಕೇಳಿದ್ದಕ್ಕೆ ಅವರು; “ಯೋಹಾನನ ಬೋಧನೆಯನ್ನು ನಂಬಿ ದೀಕ್ಷಾಸ್ನಾನಮಾಡಿಸಿಕೊಂಡೆವು” ಅಂದರು. 4ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು, 5ಅವರು ಆ ಮಾತನ್ನು ಕೇಳಿ ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡರು. 6ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು. 7ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು. 8ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.
ಪತ್ರಿಕೆ
11ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ಆದರೆ ನಿಮ್ಮ ಕಿವಿಗಳು ಮಂದವಾಗಿರುವುದರಿಂದ ಅದನ್ನು ವಿವರಿಸುವುದು ಕಷ್ಟವಾಗಿದೆ. 12ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ, ದೇವರ ವಾಕ್ಯಗಳ ಮೂಲಪಾಠಗಳನ್ನು ಒಬ್ಬನು ನಿಮಗೆ ಪುನಃ ಕಲಿಸಿಕೊಡಬೇಕಾಗಿದೆ. ನಿಮಗೆ ಇನ್ನೂ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ. 13ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ. 14ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ, ಅಂದರೆ ತಪ್ಪು ಮತ್ತು ಸರಿಯಾದ್ದದನ್ನು ಗುರುತಿಸಲು, ಅಭ್ಯಾಸದ ಮೂಲಕ ನೈಪುಣ್ಯತೆಯನ್ನು ಹೊಂದಿದವರಿಗೋಸ್ಕರವಾಗಿದೆ. 6:1ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ. 3ದೇವರು ಅನುಮತಿಸುವುದಾದರೆ ನಾವು ಇವುಗಳನ್ನು ಮಾಡುವೆವು. 4ಒಂದು ಸಾರಿ ಬೆಳಕಿನಲ್ಲಿ ಸೇರಿದವರು ಸ್ವರ್ಗೀಯ ದಾನವನ್ನು ಅನುಭವಿಸಿದವರು, ಪವಿತ್ರಾತ್ಮನಲ್ಲಿ ಪಾಲುಗಾರರಾದವರು, 5ದೇವರ ವಾಕ್ಯದ ಶ್ರೇಷ್ಠತೆಯನ್ನೂ ಮುಂದಣ ಯುಗದ ಶಕ್ತಿಯನ್ನೂ ಅನುಭವಿಸಿದವರು ಅದರಿಂದ ಹಿಂಜಾರಿಹೋದರೆ, 6ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ. 7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ. 8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.
ಸುವಾರ್ತೆ (ಮುಂದೂತ)
29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ. 30‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ. 31ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.” 32ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು. 33ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು. 34ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
ಸುವಾರ್ತೆ
5ಕೆಲವರು ದೇವಾಲಯದ ವಿಷಯದಲ್ಲಿ ಅದು ಅಂದವಾದ ಕಲ್ಲುಗಳಿಂದಲೂ ಕಾಣಿಕೆಯ ವಸ್ತುಗಳಿಂದಲೂ ಅಲಂಕಾರವಾಗಿದೆ ಎಂದು ಹೇಳುತ್ತಿರುವಾಗ, 6ಯೇಸು, “ನೀವು ಇವುಗಳನ್ನು ನೋಡುತ್ತಿದ್ದೀರಲ್ಲಾ, ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದೆ ಎಲ್ಲಾ ಕೆಡವಲ್ಪಡುವ ದಿನಗಳು ಬರುವವು” ಅಂದನು. 7ಅವರು, “ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?” ಎಂದು ಆತನನ್ನು ಕೇಳಲು, 10ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ಜನಕ್ಕೆ ವಿರೋಧವಾಗಿ ಜನರೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. 11ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು. 20“ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ನಾಶವಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. 22ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ. 23ಆ ದಿನಗಳಲ್ಲಿ ಗರ್ಭಿಣಿಯರಿಗೂ ಬಾಣಂತಿಯರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರ ಮೇಲೆ ಕ್ರೋಧವು ಉಂಟಾಗುವವು. 24ಅವರು ಕತ್ತಿಯ ಬಾಯಿಗೆ ಗುರಿಯಾಗುವರು. ಅವರು ಸೆರೆಯಾಗಿ ಅನ್ಯದೇಶಗಳಿಗೆಲ್ಲಾ ಹಿಡಿದುಕೊಂಡು ಹೋಗುವರು. ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವುದು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಜನವರಿ ಎಂದರೆ ನಾಗರಿಕ ಪಂಚಾಂಗದ 20 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು