Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 21 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 8 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 21 ಜನವರಿ 2027

ಗುರುವಾರ · ಪಂಚಾಶತ್ತಮದ ನಂತರದ 34ನೇ ವಾರ · ಸ್ವರ 8

ಹಬ್ಬಗಳು ಮತ್ತು ಸಂತರು

Afterfeast of the Theophany

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 7:1–6

1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು. 2ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು. “ಮೆಲ್ಕಿಜೆದೇಕ್”, ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ. 3ಅವನಿಗೆ ತಂದೆಯಿಲ್ಲ, ತಾಯಿಯಿಲ್ಲ, ವಂಶಾವಳಿಯೂ ಇಲ್ಲ. ಹುಟ್ಟು, ಸಾವು ಇಲ್ಲ. ಆತನು ದೇವರ ಕುಮಾರನಿಗೆ ಹೋಲಿಕೆಯಾಗಿದು, ನಿರಂತರವಾಗಿ ಯಾಜಕನಾಗಿರುವನು. 4ಈತನು ಎಷ್ಟು ಮಹಾನ್ ಆಗಿದ್ದನೆಂದು ಯೋಚಿಸಿರಿ. ನಮ್ಮ ಮೂಲಪಿತೃವಾದ ಅಬ್ರಹಾಮನು ತಾನು ಯುದ್ಧದಲ್ಲಿ ಗೆದ್ದು ತಂದ ಶ್ರೇಷ್ಠ ವಸ್ತುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಅವನಿಗೆ ಕೊಟ್ಟನಲ್ಲಾ. 5ನಿಜವಾಗಿಯೂ ಲೇವಿಯ ಕುಲದವರಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆಯಿದೆ. 6ಆದರೆ ಮೆಲ್ಕಿಜೆದೇಕನು ಲೇವಿಯ ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.

ಸುವಾರ್ತೆ

ಲೂಕ 21:28–33

28ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಯೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗಿದೆ” ಅಂದನು. 29ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ. 30ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. 31ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ. 32“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 33ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 8 ಜನವರಿ ಎಂದರೆ ನಾಗರಿಕ ಪಂಚಾಂಗದ 21 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು