Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 22 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಜನವರಿ 2027

ಶುಕ್ರವಾರ · ಸಾಮಾನ್ಯ ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಎರಡನೆಯ ವಾರದ ಶುಕ್ರವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಸಂತ ವಿನ್ಸೆಂಟ್, ಧರ್ಮಸೇವಕ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಪ್ರಾಯಶ್ಚಿತ್ತದ ದಿನ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 8:6–13

6ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. 7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. 8ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ. 9‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. 10‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು. 11ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. 12ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ. 13ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.

ಪ್ರತಿವಚನ ಕೀರ್ತನೆ

ಕೀರ್ತ 85:7, 9–13

7ಯೆಹೋವನೇ, ನಿನ್ನ ಕೃಪೆಯನ್ನು ನಮಗೆ ತೋರಿಸು; ನಿನ್ನ ರಕ್ಷಣೆಯನ್ನು ನಮಗೆ ಅನುಗ್ರಹಿಸು. 9ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು. 10ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. 11ಸತ್ಯತೆಯು ಭೂಮಿಯಿಂದ ಹುಟ್ಟುವುದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು. 12ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು. 13ನೀತಿಯು ಆತನ ಮುಂದೆ ಹೋಗುತ್ತಾ, ನಾವು ಆತನ ಹೆಜ್ಜೆಹಿಡಿದು ನಡೆಯುವಂತೆ ದಾರಿ ಮಾಡುವುದು.

ಸುವಾರ್ತೆ

ಮಾರ್ಕ 3:13–19

13ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು. 14ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ, 15ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು. 16ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು. 17ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು. 18ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ, 19ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು