Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 23 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 23 ಜನವರಿ 2027

ಶನಿವಾರ · ಸಾಮಾನ್ಯ ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಎರಡನೆಯ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 9:2–3, 11–14

2ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು. 3ಮತ್ತು ಎರಡನೆಯ ಪರದೆಯ ಹಿಂದೆ ಇನ್ನೊಂದು ಕೋಣೆಗೆ, ಅತಿ ಪವಿತ್ರ ಸ್ಥಳ ಎಂದು ಕರೆಯಲಾಗುತ್ತಿತು. 11ಕ್ರಿಸ್ತನಾದರೋ ಈಗ ದೊರೆತಿರುವ ಶುಭಗಳ ಮಹಾಯಾಜಕನಾಗಿ ಬಂದು, ಮನುಷ್ಯರ ಕೈಯಿಂದ ಕಟ್ಟಲ್ಪಡದಂಥದೂ, ಇಹಲೋಕದ ಸೃಷ್ಟಿಗೆ ಸಂಬಂಧಪಡದಂಥದೂ, ಶ್ರೇಷ್ಠವಾದುದೂ, ಬಹು ಪರಿಪೂರ್ಣವಾದುದೂ ಆಗಿರುವ ಗುಡಾರದಲ್ಲಿ ಸೇವೆ ಮಾಡುವವನಾಗಿ, 12ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ ಸ್ವಂತ ರಕ್ತದ ಮೂಲಕ ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ ನಿತ್ಯ ವಿಮೋಚನೆಯನ್ನು ಸಾಧಿಸಿದನು. 13ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ, 14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?

ಪ್ರತಿವಚನ ಕೀರ್ತನೆ

ಕೀರ್ತ 47:1–2, 5–8

1ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 5ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. 6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. 7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. 8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.

ಸುವಾರ್ತೆ

ಮಾರ್ಕ 3:20–21

20ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ. 21ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು