ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 24 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 24 ಜನವರಿ 2027
ಭಾನುವಾರ · ಸಾಮಾನ್ಯ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಮೂರನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
1ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು. 2ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು. 3ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು. 4ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು. 5ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು. 10ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
ಪ್ರತಿವಚನ ಕೀರ್ತನೆ
4ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು. 5ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. 6ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ. 7ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ. 8ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು. 9ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
ಎರಡನೆಯ ವಾಚನ
29ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, 30ಅಳುವವರು ಅಳದಂತೆಯೂ, ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಏನೂ ಇಲ್ಲದವರಂತೆಯೂ, 31ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ ಈ ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
ಸುವಾರ್ತೆ
14ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು, 15“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.” 16ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು. 17ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು. 18ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು. 19ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. 20ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
ಇಂದಿನ ಸಂತರು
- ಸಂತ ಫ್ರಾನ್ಸಿಸ್ ಡಿ ಸೇಲ್ಸ್, ಧರ್ಮಾಧ್ಯಕ್ಷ ಮತ್ತು ಧರ್ಮಸಭೆಯ ಪಂಡಿತ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು