ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 24 ಜನವರಿ
ಆರ್ಥೊಡಾಕ್ಸ್ ಪಂಚಾಂಗ · ಜನವರಿ 11 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 24 ಜನವರಿ 2027
ಭಾನುವಾರ · ಸ್ವರ 1
ಹಬ್ಬಗಳು ಮತ್ತು ಸಂತರು
ಪಂಚಾಶತ್ತಮದ ನಂತರದ 34ನೇ ಭಾನುವಾರ
ದೇವಪ್ರತ್ಯಕ್ಷತೆಯ ನಂತರದ ಭಾನುವಾರ
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಸಂಧ್ಯಾ ಪ್ರಾರ್ಥನೆ: ವಾಚನ
ಈ ಅನುವಾದದಲ್ಲಿ ಇಲ್ಲ
ಉದಯಕಾಲದ ಮೊದಲನೆಯ ಸುವಾರ್ತೆ
16ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು. 17ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು. 18ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. 19ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. 20ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.
ಪತ್ರಿಕೆ (ದೇವಪ್ರತ್ಯಕ್ಷತೆಯ ನಂತರದ ಭಾನುವಾರ)
7ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.” 9“ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10ಇಳಿದು ಬಂದಾತನು, ಸಮಸ್ತವನ್ನು ತುಂಬುವುದಕ್ಕಾಗಿ ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನು ಆಗಿದ್ದಾನೆ. 11ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು. 12ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ, 13ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
ಪತ್ರಿಕೆ (ಸಂತ ಥಿಯೊಡೋಸಿಯಸ್)
6ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು. 7ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. 8ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. 9ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. 10ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. 11ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ. 13“ನಾನು ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ. 14ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. 15ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
ಸುವಾರ್ತೆ (ದೇವಪ್ರತ್ಯಕ್ಷತೆಯ ನಂತರದ ಭಾನುವಾರ)
12ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು. 13ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು. 14ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ, 15“ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ, 16ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು. 17ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
ಸುವಾರ್ತೆ (ಸಂತ ಥಿಯೊಡೋಸಿಯಸ್)
27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 11 ಜನವರಿ ಎಂದರೆ ನಾಗರಿಕ ಪಂಚಾಂಗದ 24 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು