ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 25 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 25 ಜನವರಿ 2027
ಸೋಮವಾರ · ಸಾಮಾನ್ಯ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಅಪೊಸ್ತಲ ಸಂತ ಪೌಲನ ಮನಪರಿವರ್ತನೆ
ಹಬ್ಬ · ಆರಾಧನಾ ಬಣ್ಣ: ಬಿಳಿ
ದಿನದ ವಾಚನಗಳು
ಮೊದಲನೆಯ ವಾಚನ
ಅಥವಾ: ಅ. ಕೃ 9:1–22
3“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು. 4ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು. 5ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು. 6“ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು. 7ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು. 8“‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು. 9ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರೇ ಹೊರತು, ನನ್ನ ಸಂಗಡ ಮಾತನಾಡಿದಾತನ ಶಬ್ದವನ್ನು ಕೇಳಲಿಲ್ಲ. 10“ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು. 11ಆ ಬೆಳಕಿನ ಮಹಿಮೆಯಿಂದ ನನಗೆ ಕಣ್ಣುಕಾಣದೆ ಇದ್ದುದರಿಂದ ನನ್ನ ಜೊತೆಯಲ್ಲಿದ್ದವರು, ನನ್ನನ್ನು ಕೈಹಿಡಿದುಕೊಂಡು ದಮಸ್ಕದೊಳಕ್ಕೆ ಕರೆದುಕೊಂಡುಹೋದರು. 12“ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ 13ಒಳ್ಳೆಯವನೆಂದು ಹೆಸರು ಹೊಂದಿದವನೂ ಆಗಿದ್ದ ಅನನೀಯನೆಂಬವನು ನನ್ನ ಬಳಿಗೆ ಬಂದು, ನಿಂತು; ‘ಸಹೋದರನಾದ ಸೌಲನೇ, ನಿನ್ನ ದೃಷ್ಟಿಯನ್ನು ಹೊಂದಿಕೋ’ ಎಂದು ಹೇಳಿದನು. ಹೇಳಿದ ತಕ್ಷಣವೇ ನನಗೆ ಕಣ್ಣು ಕಾಣಿಸಿತು, ನಾನು ಅವನನ್ನು ನೋಡಿದೆನು. 14“ಆಗ ಅವನು; ‘ನಮ್ಮ ಪೂರ್ವಿಕರ ದೇವರು, ತನ್ನ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕೂ, ಆ ನೀತಿವಂತನನ್ನು ನೋಡುವುದಕ್ಕೂ, ಆತನ ಬಾಯಿಂದ ಬಂದ ಮಾತನ್ನು ಕೇಳುವುದಕ್ಕೂ ನಿನ್ನನ್ನು ನೇಮಿಸಿದ್ದಾನೆ. 15ನೀನು ಕಂಡು, ಕೇಳಿದ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು. 16ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
ಪ್ರತಿವಚನ ಕೀರ್ತನೆ
1ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ. 2ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!
ಸುವಾರ್ತೆ
15ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ. 16ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು. 17“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು; 18ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.
ಇಂದಿನ ಸಂತರು
- ಅಪೊಸ್ತಲ ಸಂತ ಪೌಲನ ಮನಪರಿವರ್ತನೆ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು