Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 25 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 12 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 25 ಜನವರಿ 2027

ಸೋಮವಾರ · ಪಂಚಾಶತ್ತಮದ ನಂತರದ 35ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Afterfeast of the Theophany

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 8:7–13

7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅಗತ್ಯವಿರುತ್ತಿರಲಿಲ್ಲ. 8ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ. 9‘ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈಹಿಡಿದು ಐಗುಪ್ತ ದೇಶದೊಳಗಿನಿಂದ ಕರೆದುಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಹಾಗಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ’ ಎಂದು ಕರ್ತನು ಹೇಳುತ್ತಾನೆ. 10‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು. 11ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ “ಕರ್ತನನ್ನು ತಿಳಿದುಕೊಳ್ಳಿರಿ” ಎಂದು ಬೋಧಿಸಬೇಕಾಗಿರುವುದಿಲ್ಲ. ಏಕೆಂದರೆ ಹೀನರಾದವರು ಮೊದಲುಗೊಂಡು ಉನ್ನತರಾದವರ ತನಕ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. 12ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ. 13ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.

ಸುವಾರ್ತೆ

ಮಾರ್ಕ 8:11–21

11ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು. 12ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು. 13ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು. 14ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ. 15ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು. 16ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು. 17ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ? 18ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ? 19ನಾನು ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು. 20“ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು. 21ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 12 ಜನವರಿ ಎಂದರೆ ನಾಗರಿಕ ಪಂಚಾಂಗದ 25 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು