ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 26 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 26 ಜನವರಿ 2027
ಮಂಗಳವಾರ · ಸಾಮಾನ್ಯ ಕಾಲದ ಮೂರನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ಮೂರನೆಯ ವಾರದ ಮಂಗಳವಾರ
ಸ್ಮರಣೆ · ಆರಾಧನಾ ಬಣ್ಣ: ಬಿಳಿ
ಸಂತರಾದ ತಿಮೊಥೆಯ ಮತ್ತು ತೀತ, ಧರ್ಮಾಧ್ಯಕ್ಷರು · ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
ಅಥವಾ: ತೀತ 1:1–5
1ಕ್ರಿಸ್ತಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ತಿಳಿಯಪಡಿಸುವುದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾದ ಪೌಲನು, 2ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ. 3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ. 4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ. 5ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ. 6ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ. 7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ. 8ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
ಪ್ರತಿವಚನ ಕೀರ್ತನೆ
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು. 3ಆತನು ನನ್ನ ಬಾಯಲ್ಲಿ ನೂತನ ಕೀರ್ತನೆಯನ್ನು ಹುಟ್ಟಿಸಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ. ಆತನ ಮಹತ್ಕಾರ್ಯಗಳನ್ನು ನೋಡಿದ ಅನೇಕರು ಭಯಭಕ್ತಿಯುಳ್ಳವರಾಗಿ ಯೆಹೋವನಲ್ಲಿ ನಂಬಿಕೆಯಿಡುವರು. 6ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ. 7ಆಗ ನಾನು, “ಇಗೋ ಇದ್ದೇನೆ; ನನ್ನ ಕರ್ತವ್ಯವು ಗ್ರಂಥದ ಸುರುಳಿಯಲ್ಲಿ ಬರೆದದೆ. 9ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ. 10ನಿನ್ನ ನೀತಿಸಾಧನೆಯನ್ನು ಮರೆಮಾಡಲಿಲ್ಲ; ನಿನ್ನ ನಂಬಿಕೆಯನ್ನೂ, ರಕ್ಷಣೆಯನ್ನೂ ಪ್ರಸಿದ್ಧಪಡಿಸಿದೆನು; ನಿನ್ನ ಕೃಪಾಸತ್ಯತೆಗಳನ್ನು ಮಹಾಸಮುದಾಯದಲ್ಲಿ ತಿಳಿಸದೆ ಇರಲಿಲ್ಲ.
ಸುವಾರ್ತೆ
31ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು. 32ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು. 33ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ, 34“ಇಗೋ, ನನ್ನ ತಾಯಿ, ನನ್ನ ತಮ್ಮಂದಿರು. 35ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
ಇಂದಿನ ಸಂತರು
- ಸಂತರಾದ ತಿಮೊಥೆಯ ಮತ್ತು ತೀತ, ಧರ್ಮಾಧ್ಯಕ್ಷರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು