Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 26 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 13 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 26 ಜನವರಿ 2027

ಮಂಗಳವಾರ · ಪಂಚಾಶತ್ತಮದ ನಂತರದ 35ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Afterfeast of the Theophany

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 9:8–10, 15–23

8ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ. 9ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ. 10ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. 15ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. 16ಮರಣ ಶಾಸನವು ಇರುವಲ್ಲಿ ಆದನ್ನು ಬರೆಸಿದ ವ್ಯಕ್ತಿಯ ಸಾವನ್ನು ಸಾಬೀತಪಡಿಸುವುದು ಅಗತ್ಯ. 17ಮರಣ ಶಾಸನವು ವ್ಯಕ್ತಿಯ ಮರಣವಾದ ಮೇಲೆ ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಬರೆದವನು ಜೀವದಿಂದಿರುವಾಗ ಎಂದಿಗೂ ಜಾರಿಗೆ ಬರುವುದಿಲ್ಲ. 18ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಸ್ಥಾಪಿತವಾಗಲಿಲ್ಲ. 19ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು. 20“ಇದು ದೇವರು ನಿಮಗೋಸ್ಕರ ಆಜ್ಞಾಪಿಸಿದ ಒಡಂಬಡಿಕೆಯ ರಕ್ತವಾಗಿದೆ” ಎಂದು ಹೇಳಿದನು. 21ಇದಲ್ಲದೆ ಗುಡಾರದ ಮೇಲೆಯೂ ದೇವರ ಸೇವೆಗೆ ಬೇಕಾಗಿರುವ ಎಲ್ಲಾ ಪಾತ್ರೆಗಳ ಮೇಲೆಯೂ ಅದೇ ರೀತಿಯಾಗಿ ರಕ್ತವನ್ನು ಪ್ರೋಕ್ಷಿಸಿದನು. 22ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ. 23ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.

ಸುವಾರ್ತೆ

ಮಾರ್ಕ 8:22–26

22ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು. 23ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು. 24ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು. 25ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು. 26ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 13 ಜನವರಿ ಎಂದರೆ ನಾಗರಿಕ ಪಂಚಾಂಗದ 26 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು