Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 27 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 14 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 27 ಜನವರಿ 2027

ಬುಧವಾರ · ಪಂಚಾಶತ್ತಮದ ನಂತರದ 35ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Apodosis of the Theophany

ಉಪವಾಸದ ದಿನ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 10:1–18

1ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು. 2ತಂದಿದ್ದ ಪಕ್ಷದಲ್ಲಿ ಯಜ್ಞಗಳ ನಿಂತು ಹೋಗುತ್ತಿದ್ದವು, ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ, ಅವರಿಗೆ ಪಾಪದ ಪ್ರಜ್ಞೆ ಎಂದಿಗೂ ಕಾಡುತ್ತಿರಲಿಲ್ಲ. 3ಈಗಲಾದರೋ ಆ ಯಜ್ಞಗಳಿಂದ ಪ್ರತಿ ವರ್ಷದಲ್ಲಿಯೂ ಪಾಪಗಳ ಜ್ಞಾಪಕವಾಗುವುದುಂಟು, 4ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ. 5ಆದ್ದರಿಂದ ಕ್ರಿಸ್ತನು ಭೂಲೋಕದೊಳಗೆ ಬರುವಾಗ, “(ದೇವರೇ,) ಯಜ್ಞಗಳೂ ಕಾಣಿಕೆಗಳೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ, 6ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ. 7ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು. 8ಧರ್ಮಶಾಸ್ತ್ರದ ಪ್ರಕಾರ ಅರ್ಪಿಸಲ್ಪಟ್ಟ ಯಜ್ಞಗಳು, “ಸರ್ವಾಂಗಹೋಮಗಳು ಮತ್ತು ಪಾಪಪರಿಹಾರಕ ಯಜ್ಞಗಳು ನಿನಗೆ ಇಷ್ಟವಾಗಿರಲಿಲ್ಲ. ನೀನು ಅವುಗಳಲ್ಲಿ ಸಂತೋಷಪಡುವುದಿಲ್ಲ” ಎಂದು ಹೇಳಿದ್ದಾನೆ. 9ತರುವಾಯ ಆತನು “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ. 10ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆ ಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧೀಕರಿಸಲ್ಪಟ್ಟವರಾಗಿರುವೆವು. 11ಇದಲ್ಲದೆ ಪ್ರತಿಯೊಬ್ಬ ಯಾಜಕನು ಪ್ರತಿದಿನ ಸೇವೆಮಾಡುತ್ತಾ, ಎಂದಿಗೂ ಪಾಪಗಳನ್ನು ತೆಗೆದು ಹಾಕಲಾರದಂಥ, ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಸಮರ್ಪಿಸುತ್ತಾ ನಿಂತುಕೊಂಡಿರುವನು. 12ಆದರೆ ಕ್ರಿಸ್ತನು ಪಾಪಗಳಿಗೋಸ್ಕರ ಸದಾಕಾಲಕ್ಕೂ ಒಂದೇ ಯಜ್ಞವನ್ನು ಸಮರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡನು. 13ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದಪೀಠವಾಗಿ ಮಾಡಲ್ಪಡುವ ತನಕ ಆತನು ಕಾಯುತ್ತಿರುವನು. 14ಆತನು ಶುದ್ಧೀಕರಿಸಲ್ಪಡುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಪರಿಪೂರ್ಣರನ್ನಾಗಿ ಮಾಡಿದ್ದಾನೆ. 15ಪವಿತ್ರಾತ್ಮನು ಸಹ ನಮಗೆ ಸಾಕ್ಷಿಕೊಡುವಾತನಾಗಿ, 16“ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು, 17“ಅವರ ಪಾಪಗಳನ್ನೂ ಅವರ ದುಷ್ಕೃತ್ಯಗಳನ್ನೂ ನನ್ನ ನೆನಪಿಗೆ ಎಂದಿಗೂ ತಂದುಕೊಳ್ಳುವುದಿಲ್ಲ.” ಎಂದು ಹೇಳುತ್ತಾನೆ. 18ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ.

ಸುವಾರ್ತೆ

ಮಾರ್ಕ 8:30–34

30ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು. 31ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು. 32ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು. 33ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು. 34ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 14 ಜನವರಿ ಎಂದರೆ ನಾಗರಿಕ ಪಂಚಾಂಗದ 27 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು