Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 28 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 28 ಜನವರಿ 2027

ಗುರುವಾರ · ಸಾಮಾನ್ಯ ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಮೂರನೆಯ ವಾರದ ಗುರುವಾರ

ಸ್ಮರಣೆ · ಆರಾಧನಾ ಬಣ್ಣ: ಬಿಳಿ

ಸಂತ ಥಾಮಸ್ ಅಕ್ವಿನಾಸ್, ಧರ್ಮಗುರು ಮತ್ತು ಧರ್ಮಸಭೆಯ ಪಂಡಿತ · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 10:19–25

19ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. 21ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ. 22ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ. 23ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು. 24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. 25ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.

ಪ್ರತಿವಚನ ಕೀರ್ತನೆ

ಕೀರ್ತ 24:1–6

1ದಾವೀದನ ಕೀರ್ತನೆ. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. 2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ. 3ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು? 4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ, 5ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು. 6ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ

ಸುವಾರ್ತೆ

ಮಾರ್ಕ 4:21–25

21ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ? 22ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ. 23ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು. 24ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು. 25ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು