Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 28 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 15 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 28 ಜನವರಿ 2027

ಗುರುವಾರ · ಪಂಚಾಶತ್ತಮದ ನಂತರದ 35ನೇ ವಾರ · ಸ್ವರ 1

ಹಬ್ಬಗಳು ಮತ್ತು ಸಂತರು

Venerable Paul of Thebes († 341)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 10:35–11:7

35ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು. 36ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. 37“ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. 38ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.” 39ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ. 11:1ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ. 2ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು. 3ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ. 4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ. 5ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು. 6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು. 7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.

ಸುವಾರ್ತೆ

ಮಾರ್ಕ 9:10–16

10ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. 11ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು. 12ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ? 13ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು. 14ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು. 15ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು. 16ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 15 ಜನವರಿ ಎಂದರೆ ನಾಗರಿಕ ಪಂಚಾಂಗದ 28 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು