Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 30 ಜನವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 30 ಜನವರಿ 2027

ಶನಿವಾರ · ಸಾಮಾನ್ಯ ಕಾಲದ ಮೂರನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ಮೂರನೆಯ ವಾರದ ಶನಿವಾರ

ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು

ಶನಿವಾರದ ಪೂಜ್ಯ ಕನ್ಯೆ ಮರಿಯಳ ಸ್ಮರಣೆ · ಐಚ್ಛಿಕ ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 11:1–2, 8–19

1ನಂಬಿಕೆಯೋ ನಾವು ನಿರೀಕ್ಷಿಸುವಂಥವುಗಳ ಭರವಸೆಯೂ, ಇನ್ನೂ ಕಣ್ಣಿಗೆ ಕಾಣದವುಗಳ ಮೇಲಿನ ನಿಶ್ಚಯವೂ ಆಗಿದೆ. 2ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು. 8ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು. 9ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು. 10ಯಾಕೆಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು. 11ಇದಲ್ಲದೆ ಸಾರಳು ವಾಗ್ದಾನ ಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವುದಕ್ಕೆ ಶಕ್ತಿಯನ್ನು ಹೊಂದಿದಳು. 12ಆದುದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾದ ಮಕ್ಕಳು ಹುಟ್ಟಿದರು. 13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು. 14ಇಂಥ ಮಾತುಗಳನ್ನಾಡುವವರು ತಾವು ಸ್ವದೇಶವನ್ನು ಹುಡುಕುವವರಾಗಿದ್ದರೆಂಬುದನ್ನು ವ್ಯಕ್ತಪಡಿಸುತ್ತದೆ. 15ತಾವು ಬಿಟ್ಟು ಬಂದ ದೇಶದ ಮೇಲೆ ಮನಸ್ಸಿಟ್ಟವರಾಗಿದ್ದರೆ ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು. 16ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ. 17ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು. 19ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು.

ಪ್ರತಿವಚನ ಕೀರ್ತನೆ

ಲೂಕ 1:69–75

69ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ. 70ಆತನು ಪೂರ್ವಕಾಲದಲ್ಲಿಯೇ ತನ್ನ ಪರಿಶುದ್ಧ ಪ್ರವಾದಿಗಳ ಮೂಲಕ ತಾನು ಹೇಳಿದಂತೆಯೇ, 71ನಮ್ಮ ವೈರಿಗಳಿಂದಲೂ, ನಮ್ಮನ್ನು ದ್ವೇಷಿಸುವವರೆಲ್ಲರ ಕೈಯಿಂದಲೂ ನಮ್ಮನ್ನು ತಪ್ಪಿಸಿ ರಕ್ಷಿಸಿದ್ದಾನೆ. 72ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ. 74ಹೀಗೆ ನಾವು ನಮ್ಮ ವೈರಿಗಳ ಕೈಯಿಂದ ಬಿಡುಗಡೆಹೊಂದಿ ಭಯವಿಲ್ಲದವರಾಗಿದ್ದು, ನಮ್ಮ ಜೀವಮಾನದಲ್ಲೆಲ್ಲಾ ನಿರ್ಮಲಚಿತ್ತದಿಂದಲೂ ನೀತಿಯಿಂದಲೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವಂತೆ ನಮಗೆ ಅನುಕೂಲಮಾಡಿದ್ದಾನೆ.

ಸುವಾರ್ತೆ

ಮಾರ್ಕ 4:35–41

35ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು. 36ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು. 37ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. 38ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು. 39ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. 40ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು 41ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು