ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 31 ಜನವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 31 ಜನವರಿ 2027
ಭಾನುವಾರ · ಸಾಮಾನ್ಯ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ನಾಲ್ಕನೆಯ ಭಾನುವಾರ
ಭಾನುವಾರ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
15ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು. 16ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನೀವು, “ನಮ್ಮ ದೇವರಾದ ಯೆಹೋವನ ಸ್ವರವನ್ನು ಇನ್ನು ಕೇಳುವುದಕ್ಕಾಗಲಿ ಅಥವಾ ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡವುದಕ್ಕಾಗಲಿ ನಮಗೆ ಮನಸ್ಸಿಲ್ಲ, ಹಾಗೇನಾದರು ಕೇಳಿ ನೋಡಿದರೆ ಸತ್ತು ಹೋಗುವೆವು” ಎಂದು ನೀವು ಹೇಳಿದಿರಷ್ಟೆ. 17ಆಗ ಯೆಹೋವನು ನನಗೆ, “ಇವರು ಹೇಳಿದ ಮಾತು ಒಳ್ಳೆಯದೇ; 18ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು. 19ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು. 20ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.
ಪ್ರತಿವಚನ ಕೀರ್ತನೆ
1ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ. 2ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ. 6ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ. 7ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು. 8ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ, ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ. 9ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.
ಎರಡನೆಯ ವಾಚನ
32ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ. 33ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ. 34ಅದರಂತೆ ಮುತೈದೆಗೂ, ಕನ್ನಿಕೆಗೂ ವ್ಯತ್ಯಾಸವುಂಟು. ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಹೇಗೆ ಪವಿತ್ರಳಾಗಿರಬೇಕೆಂದು ಕರ್ತನ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. ಆದರೆ ಮದುವೆಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾಳೆ. 35ನಾನು ನಿಮಗೆ ನಿರ್ಬಂಧ ಏರಬೇಕೆಂದು ಇದನ್ನು ಹೇಳುತ್ತಿಲ್ಲ. ನೀವು ಚಂಚಲ ಚಿತ್ತರಾಗದೆ ಕರ್ತನಿಗೆ ಮಾನ್ಯತೆಯುಳ್ಳವರಾಗಿ, ನಿಷ್ಠೆಯುಳ್ಳವರಾಗಿ ನಡೆದುಕೊಳ್ಳಬೇಕೆಂದು ನಿಮ್ಮ ಪ್ರಯೋಜನಕ್ಕೋಸ್ಕರವೇ ಹೇಳುತ್ತಿದ್ದೇನೆ.
ಸುವಾರ್ತೆ
21ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು. 22ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು. 23ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. 24ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು. 25ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು. 26ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು. 27ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು. 28ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
ಇಂದಿನ ಸಂತರು
- ಸಂತ ಜಾನ್ ಬೊಸ್ಕೊ, ಧರ್ಮಗುರು
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು