Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಜನವರಿ 2027 › 31 ಜನವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 18 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 31 ಜನವರಿ 2027

ಭಾನುವಾರ · ಸ್ವರ 2

ಹಬ್ಬಗಳು ಮತ್ತು ಸಂತರು

ಪಂಚಾಶತ್ತಮದ ನಂತರದ 35ನೇ ಭಾನುವಾರ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಉದಯಕಾಲದ ಎರಡನೆಯ ಸುವಾರ್ತೆ

ಮಾರ್ಕ 16:1–8

1ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು. 2ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು. 3“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು. 4ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು. 5ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು. 6ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ, 7ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು. 8ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.

ಪತ್ರಿಕೆ

ಕೊಲೊ 3:12–16

12ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. 14ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. 15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. 16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಪತ್ರಿಕೆ (ಸಂತರಾದ ಅಥನಾಸಿಯಸ್ ಮತ್ತು ಸಿರಿಲ್)

ಇಬ್ರಿ 13:7–16

7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ. 8ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. 9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ. 10ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ. 11ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ. 12ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು. 13ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ. 14ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ. 15ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. 16ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ಸುವಾರ್ತೆ

ಲೂಕ 18:18–27

18ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ, 19ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ. 20‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು. 21ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು. 22ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 23ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು. 24ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ. 25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಅಂದನು. 26ಈ ಮಾತನ್ನು ಕೇಳಿದವರು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು?” ಎಂದು ಕೇಳಲು, 27ಆತನು, “ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ” ಅಂದನು.

ಸುವಾರ್ತೆ (ಸಂತರಾದ ಅಥನಾಸಿಯಸ್ ಮತ್ತು ಸಿರಿಲ್)

ಮತ್ತಾ 5:14–19

14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು. 15ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು. 16ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು. 17“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ. 18ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ. 19ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 18 ಜನವರಿ ಎಂದರೆ ನಾಗರಿಕ ಪಂಚಾಂಗದ 31 ಜನವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು