ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 1 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 1 ಫೆಬ್ರವರಿ 2027
ಸೋಮವಾರ · ಸಾಮಾನ್ಯ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ನಾಲ್ಕನೆಯ ವಾರದ ಸೋಮವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
32ಇನ್ನೂ ಏನು ಹೇಳಬೇಕು? ಗಿದ್ಯೋನ್, ಬಾರಾಕ ಸಂಸೋನ, ಯೆಪ್ತಾಹ, ದಾವೀದ, ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು. 33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., 34ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು. 35ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು. 36ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು. 37ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು. 38ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. 39ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ. 40ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.
ಪ್ರತಿವಚನ ಕೀರ್ತನೆ
19ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ. 20ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ. 21ಮುತ್ತಿಗೆ ಹಾಕಲ್ಪಟ್ಟಿರುವ ನಗರದಲ್ಲಿದ್ದ ನನಗೆ, ತನ್ನ ಕೃಪೆಯನ್ನು ಆಶ್ಚರ್ಯಕರವಾಗಿ ತೋರಿಸಿದ ಯೆಹೋವನಿಗೆ ಸ್ತೋತ್ರ. 22ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ. 23ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ.
ಸುವಾರ್ತೆ
1ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು. 2ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. 3ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ. 5ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು. 6ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು, 7ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು. 8ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು. 9ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ, 10ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು. 11ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. 12ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು. 13ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು. 14ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು. 15ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು. 16ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು. 17ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು. 18ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು. 19ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು. 20ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು