Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 1 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 19 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 1 ಫೆಬ್ರವರಿ 2027

ಸೋಮವಾರ · ಪಂಚಾಶತ್ತಮದ ನಂತರದ 36ನೇ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Venerable Macarius the Great, of Egypt († c. 390-391)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಇಬ್ರಿ 11:17–23, 27–31

17ಅಬ್ರಹಾಮನು ಪರೀಕ್ಷಿಸಲ್ಪಟ್ಟಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು” ಎಂದು ದೇವರು ಅವನಿಗೆ ಹೇಳಿದ್ದರೂ ತನ್ನ ಏಕಪುತ್ರನನ್ನು ಅರ್ಪಿಸಿದನು. 19ನನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸಲು ಸಮರ್ಥನಾಗಿದ್ದಾನೆಂದು ತಿಳಿದುಕೊಂಡಿದ್ದನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಪಡೆದುಕೊಂಡನು. 20ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು. 21ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. 22ಯೋಸೇಫನು ತನ್ನ ಮರಣ ಸಮಯದಲ್ಲಿ ಇಸ್ರಾಯೇಲ್ಯರು ಐಗುಪ್ತದೇಶದಿಂದ ಹೊರಡುವುದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳನ್ನು ತೆಗೆದುಕೊಂಡು ಹೋಗುವ ವಿಷಯದಲ್ಲಿ ಅಪ್ಪಣೆ ಕೊಟ್ಟನು. 23ಮೋಶೆ ಹುಟ್ಟಿದಾಗ ಅವನ ತಂದೆತಾಯಿಗಳು ಕೂಸು ಸುಂದರವಾಗಿದೆ ಎಂದು ನೋಡಿ ಅರಸನ ಅಪ್ಪಣೆಗೆ ಭಯಪಡದೇ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು. 27ನಂಬಿಕೆಯಿಂದಲೇ ಅವನು ಅರಸನ ರೌದ್ರಕ್ಕೆ ಭಯಪಡದೇ ಐಗುಪ್ತದೇಶವನ್ನು ಬಿಟ್ಟುಹೋದನು. ಏಕೆಂದರೆ ಅವನು ಅದೃಶ್ಯನಾಗಿರುವಾತನನ್ನು ದೃಷ್ಟಿಸುವವನಂತೆ ದೃಢಚಿತ್ತನಾಗಿದ್ದನು. 28ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು. 29ಇಸ್ರಾಯೇಲ್ಯರು ನಂಬಿಕೆಯಿಂದಲೇ ಕೆಂಪು ಸಮುದ್ರವನ್ನು ಒಣ ಭೂಮಿಯನ್ನು ದಾಟುವಂತೆ ದಾಟಿದರು. ಐಗುಪ್ತದೇಶದವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿದಾಗ ಮುಳುಗಿ ಹೋದರು. 30ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು. 31ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.

ಪತ್ರಿಕೆ (ಮಂಗಳವಾರಕ್ಕೆ)

ಇಬ್ರಿ 12:25–26; 13:22–25

25ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು? 26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ. 13:22ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ. 23ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು. 24ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ. 25ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.

ಪತ್ರಿಕೆ (ಮಹಾನ್ ಸಂತ ಮಕಾರಿಯಸ್)

ಗಲಾ 5:22–6:2

22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.

ಸುವಾರ್ತೆ

ಮಾರ್ಕ 9:42–10:1

42ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ. 43ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿ ಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. 45ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. 47ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. 48ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ. 49“ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು. 50ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.” 10:1ಯೇಸು ಅಲ್ಲಿಂದ ಹೊರಟು ಯೂದಾಯ ಪ್ರಾಂತ್ಯಕ್ಕೂ ಯೊರ್ದನ್ ಹೊಳೆಯ ಆಚೆಯ ಸೀಮೆಗೂ ಬಂದನು. ಅಲ್ಲಿ ಜನರು ತಿರುಗಿ ಗುಂಪುಗುಂಪಾಗಿ ಆತನ ಬಳಿಗೆ ಕೂಡಿ ಬರಲು ಆತನು ತಿರುಗಿ ಎಂದಿನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

ಸುವಾರ್ತೆ (ಮಂಗಳವಾರಕ್ಕೆ)

ಮಾರ್ಕ 10:2–12

2ಆಗ ಫರಿಸಾಯರು ಆತನ ಹತ್ತಿರಕ್ಕೆ ಬಂದು ಆತನನ್ನು ಪರೀಕ್ಷಿಸಬೇಕೆಂಬ ಯೋಚನೆಯಿಂದ, “ಒಬ್ಬನು ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮವೋ ಹೇಗೆ” ಎಂದು ಕೇಳಿದರು. 3ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು. 4ಅದಕ್ಕೆ ಅವರು, “ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಅನುಮತಿ ಕೊಟ್ಟನು” ಅಂದರು. 5ಆದರೆ ಯೇಸು ಅವರಿಗೆ, “ಅವನು ನಿಮ್ಮ ಮೊಂಡತನವನ್ನು ನೋಡಿ ನಿಮಗೆ ಇಂಥಾ ಆಜ್ಞೆಯನ್ನು ಬರೆದಿಟ್ಟನು. 6ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು. 7ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. 8ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. 9ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಎಂದು ಹೇಳಿದನು. 10ಅವರು ಮನೆಯಲ್ಲಿದ್ದಾಗ ಆತನ ಶಿಷ್ಯರು ಈ ವಿಷಯವಾಗಿ ಆತನನ್ನು ಪುನಃ ಕೇಳಿದರು. 11ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; 12ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 19 ಜನವರಿ ಎಂದರೆ ನಾಗರಿಕ ಪಂಚಾಂಗದ 1 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು