Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 2 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 20 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 2 ಫೆಬ್ರವರಿ 2027

ಮಂಗಳವಾರ · ಪಂಚಾಶತ್ತಮದ ನಂತರದ 36ನೇ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Venerable Euthymius the Great († 473)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಮತ್ತಾ 11:27–30

27ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. 28“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.

ಪತ್ರಿಕೆ (ಸಂತ ಯೂಥಿಮಿಯಸ್)

ಇಬ್ರಿ 13:17–21

17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. 18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ. 19ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ. 20ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ಸುವಾರ್ತೆ (ಸಂತ ಯೂಥಿಮಿಯಸ್)

ಲೂಕ 6:17–23

17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 20 ಜನವರಿ ಎಂದರೆ ನಾಗರಿಕ ಪಂಚಾಂಗದ 2 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು