ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 3 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 3 ಫೆಬ್ರವರಿ 2027
ಬುಧವಾರ · ಸಾಮಾನ್ಯ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ನಾಲ್ಕನೆಯ ವಾರದ ಬುಧವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ಹಸಿರು
ಸಂತ ಆನ್ಸ್ಗರ್, ಧರ್ಮಾಧ್ಯಕ್ಷ · ಐಚ್ಛಿಕ ಸ್ಮರಣೆ
ಸಂತ ಬ್ಲೇಸ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ · ಐಚ್ಛಿಕ ಸ್ಮರಣೆ
ದಿನದ ವಾಚನಗಳು
ಮೊದಲನೆಯ ವಾಚನ
4ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ. 5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.” 6ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ. 7ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? 11ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ. 12ಆದುದ್ದರಿಂದ ಜೋಲುಬಿದ್ದ ಕೈಗಳನ್ನೂ ಮತ್ತು ನಡುಗುವ ಮೊಣಕಾಲುಗಳನ್ನೂ ಬಲಪಡಿಸಿರಿ. 13ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಕುಂಟುವ ಕಾಲು ಉಳುಕಿ ಹೋಗದೇ ವಾಸಿಯಾಗುವುದು. 14ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ. 15ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ. 2ನನ್ನ ಮನವೇ, ಯೆಹೋವನನ್ನು ಕೊಂಡಾಡು; ಆತನ ಉಪಕಾರಗಳಲ್ಲಿ ಒಂದನ್ನೂ ಮರೆಯಬೇಡ. 13ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. 14ನಾವು ರೂಪಗೊಂಡಿದ್ದನ್ನು ಆತನು ಬಲ್ಲನು; ನಾವು ಧೂಳಾಗಿದ್ದೇವೆ ಎಂಬುವುದನ್ನು ನೆನಪುಮಾಡಿಕೊಳ್ಳುತ್ತಾನೆ. 17ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ. 18ಆತನ ನಿಬಂಧನೆಗಳನ್ನು ಕೈಕೊಂಡು, ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
ಸುವಾರ್ತೆ
1ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 2ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ? 3ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು. 4ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು. 5ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ. 6ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
ಇಂದಿನ ಸಂತರು
- ಸಂತ ಆನ್ಸ್ಗರ್, ಧರ್ಮಾಧ್ಯಕ್ಷ
- ಸಂತ ಬ್ಲೇಸ್, ಧರ್ಮಾಧ್ಯಕ್ಷ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು