ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 3 ಫೆಬ್ರವರಿ
ಆರ್ಥೊಡಾಕ್ಸ್ ಪಂಚಾಂಗ · ಜನವರಿ 21 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 3 ಫೆಬ್ರವರಿ 2027
ಬುಧವಾರ · ಪಂಚಾಶತ್ತಮದ ನಂತರದ 36ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Venerable Maximus the Confessor († 662)
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.” 2ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. 3ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. 4ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ. 5ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ. 6ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ. 7ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ. 8ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ. 9ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. 10ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. 11ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು. 12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು. 13ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ. 14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. 15ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ. 16ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ. 17ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ. 18ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
ಸುವಾರ್ತೆ
11ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; 12ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ” ಎಂದು ಹೇಳಿದನು. 13ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು. 14ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ. 15ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು. 16ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 21 ಜನವರಿ ಎಂದರೆ ನಾಗರಿಕ ಪಂಚಾಂಗದ 3 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು