ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 4 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 4 ಫೆಬ್ರವರಿ 2027
ಗುರುವಾರ · ಸಾಮಾನ್ಯ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ನಾಲ್ಕನೆಯ ವಾರದ ಗುರುವಾರ
ವಾರದ ದಿನ · ಆರಾಧನಾ ಬಣ್ಣ: ಹಸಿರು
ದಿನದ ವಾಚನಗಳು
ಮೊದಲನೆಯ ವಾಚನ
18ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು. 21ಇದಲ್ಲದೆ ಆ ದೃಶ್ಯವು ಅತಿ ಭಯಾನಕವಾಗಿದ್ದದರಿಂದ ಮೋಶೆಯು, “ನಾನು ಹೆದರಿ, ನಡುಗುತ್ತಿದ್ದೇನೆ” ಎಂದು ಹೇಳಿದನು. 22ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ, 23ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ, 24ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಪ್ರತಿವಚನ ಕೀರ್ತನೆ
1ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ. 2ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು. 3ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು. 8ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ 9ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ; 10ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.
ಸುವಾರ್ತೆ
7ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು, 8“ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ. 9ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು. 10ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ. 11ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು. 12ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು. 13ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು