Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 4 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 22 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 4 ಫೆಬ್ರವರಿ 2027

ಗುರುವಾರ · ಪಂಚಾಶತ್ತಮದ ನಂತರದ 36ನೇ ವಾರ · ಸ್ವರ 2

ಹಬ್ಬಗಳು ಮತ್ತು ಸಂತರು

Apostle Timothy of the Seventy († 96)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಯಾಕೋ 1:19–27

19ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. 20ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. 21ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ. 22ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ. 23ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು. 24ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು. 25ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು. 26ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ. 27ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಸುವಾರ್ತೆ

ಮಾರ್ಕ 10:17–27

17ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು. 18ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾರೂ ಒಳ್ಳೆಯವರಲ್ಲ. 19ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು. 20ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು, 21ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. 22ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು. 23ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು. 24ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ. 25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು. 26ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. 27ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 22 ಜನವರಿ ಎಂದರೆ ನಾಗರಿಕ ಪಂಚಾಂಗದ 4 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು