ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 5 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 5 ಫೆಬ್ರವರಿ 2027
ಶುಕ್ರವಾರ · ಸಾಮಾನ್ಯ ಕಾಲದ ನಾಲ್ಕನೆಯ ವಾರ
ಹಬ್ಬಗಳು ಮತ್ತು ಸಂತರು
ಸಾಮಾನ್ಯ ಕಾಲದ ನಾಲ್ಕನೆಯ ವಾರದ ಶುಕ್ರವಾರ
ಸ್ಮರಣೆ · ಆರಾಧನಾ ಬಣ್ಣ: ಕೆಂಪು
ಸಂತ ಅಗಾಥಾ, ಕನ್ಯೆ ಮತ್ತು ಹುತಾತ್ಮ · ಸ್ಮರಣೆ
ಉಪವಾಸ ಮತ್ತು ಪ್ರಾಯಶ್ಚಿತ್ತ
ಪ್ರಾಯಶ್ಚಿತ್ತದ ದಿನ
ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.
ದಿನದ ವಾಚನಗಳು
ಮೊದಲನೆಯ ವಾಚನ
1ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ. 2ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ. 3ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ. 4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ. 5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ. 6ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. 7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ. 8ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? 3ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು. 5ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಶಿಖರದ ಮೇಲೆ ನನ್ನನ್ನು ಸುರಕ್ಷಿತವಾಗಿ ನಿಲ್ಲಿಸುವನು. 8“ನನ್ನ ಸಾನ್ನಿಧ್ಯಕ್ಕೆ ಬಾ” ಎಂಬ ನಿನ್ನ ಮಾತಿಗೆ, ನಾನು, “ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು” ಎಂದು ಉತ್ತರಕೊಟ್ಟೆನು. 9ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.
ಸುವಾರ್ತೆ
14ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು. 15ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು. 16ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು. 17ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು. 18ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು. 19ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ. 20ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು. 21ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ, 22ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ. 23ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು. 24ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು. 25ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು. 26ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ. 27ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು; 28ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು. 29ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
ಇಂದಿನ ಸಂತರು
- ಸಂತ ಅಗಾಥಾ, ಕನ್ಯೆ ಮತ್ತು ಹುತಾತ್ಮ
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು