ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 5 ಫೆಬ್ರವರಿ
ಆರ್ಥೊಡಾಕ್ಸ್ ಪಂಚಾಂಗ · ಜನವರಿ 23 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 5 ಫೆಬ್ರವರಿ 2027
ಶುಕ್ರವಾರ · ಪಂಚಾಶತ್ತಮದ ನಂತರದ 36ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Hieromartyr Clement, Bishop of Ancyra, and Martyr Agathangelus († c. 312)
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು. 2ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ, 3ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ, 4ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? 5ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? 6ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? 7ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ? 8ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ. 9ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ. 10ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ. 11ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ. 12ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ. 13ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.
ಸುವಾರ್ತೆ
23ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು. 24ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ. 25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಕಣ್ಣಿನಲ್ಲಿ ನುಗ್ಗುವುದು ಸುಲಭ” ಎಂದು ಹೇಳಿದನು. 26ಈ ಮಾತಿಗೆ ಅವರು ಇನ್ನಷ್ಟು ಆಶ್ಚರ್ಯಪಟ್ಟು, “ಹಾಗಾದರೆ ಯಾರಿಗೆ ರಕ್ಷಣೆಯಾದೀತು” ಎಂದು ತಮ್ಮತಮ್ಮೊಳಗೆ ಅಂದುಕೊಂಡರು. 27ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು. 28ಪೇತ್ರನು ಆತನಿಗೆ, “ಇಗೋ ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ” ಎಂದು ಹೇಳುವುದಕ್ಕೆ ಪ್ರಾರಂಭಿಸಿದನು. 29ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ, 30ಅವನಿಗೆ ಈ ಕಾಲದಲ್ಲಿಯೇ ಮನೆ, ಸಹೋದರರು, ಸಹೋದರಿಯರು, ತಾಯಿ, ಮಕ್ಕಳು, ಹೊಲಗದ್ದೆಗಳು ಇವೆಲ್ಲವೂ ಹಿಂಸೆಗಳ ಸಹಿತವಾಗಿ ನೂರರಷ್ಟು ಸಿಕ್ಕೇ ಸಿಗುತ್ತವೆ ಮತ್ತು ಮುಂದಣ ಲೋಕದಲ್ಲಿ ನಿತ್ಯಜೀವವು ದೊರೆಯುವುದು. 31ಆದರೆ ಬಹು ಮಂದಿ ಮೊದಲಿನವರು ಕಡೆಯವರಾಗುವರು, ಕಡೆಯವರು ಮೊದಲಿನವರಾಗುವರು” ಎಂದು ಹೇಳಿದನು. 32ಅವರು ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿರುವಾಗ ಯೇಸು ಅವರೆಲ್ಲರಿಗಿಂತ ಮುಂದಾಗಿ ನಡೆದುಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಆತನನ್ನು ಹಿಂಬಾಲಿಸುವವರು ಭಯಪಟ್ಟರು. ಆಗ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಪುನಃ ಕರೆದುಕೊಂಡು ಮುಂದೆ ತನಗೆ ಸಂಭವಿಸುವ ಸಂಗತಿಯನ್ನು ಹೇಳುವುದಕ್ಕೆ ಪ್ರಾರಂಭಿಸಿದನು;
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 23 ಜನವರಿ ಎಂದರೆ ನಾಗರಿಕ ಪಂಚಾಂಗದ 5 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು