Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 6 ಫೆಬ್ರವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 6 ಫೆಬ್ರವರಿ 2027

ಶನಿವಾರ · ಸಾಮಾನ್ಯ ಕಾಲದ ನಾಲ್ಕನೆಯ ವಾರ

ಹಬ್ಬಗಳು ಮತ್ತು ಸಂತರು

ಸಾಮಾನ್ಯ ಕಾಲದ ನಾಲ್ಕನೆಯ ವಾರದ ಶನಿವಾರ

ಸ್ಮರಣೆ · ಆರಾಧನಾ ಬಣ್ಣ: ಕೆಂಪು

ಸಂತ ಪಾಲ್ ಮಿಕಿ ಮತ್ತು ಸಂಗಡಿಗರು, ಹುತಾತ್ಮರು · ಸ್ಮರಣೆ

ದಿನದ ವಾಚನಗಳು

ಮೊದಲನೆಯ ವಾಚನ

ಇಬ್ರಿ 13:15–17, 20–21

15ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ. 16ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು. 17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. 20ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ಪ್ರತಿವಚನ ಕೀರ್ತನೆ

ಕೀರ್ತ 23:1–6

1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ಸುವಾರ್ತೆ

ಮಾರ್ಕ 6:30–34

30ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು. 31ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. 32ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು. 33ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು. 34ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು