ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 6 ಫೆಬ್ರವರಿ
ಆರ್ಥೊಡಾಕ್ಸ್ ಪಂಚಾಂಗ · ಜನವರಿ 24 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 6 ಫೆಬ್ರವರಿ 2027
ಶನಿವಾರ · ಪಂಚಾಶತ್ತಮದ ನಂತರದ 36ನೇ ವಾರ · ಸ್ವರ 2
ಹಬ್ಬಗಳು ಮತ್ತು ಸಂತರು
Venerable Xenia of Rome and her two female slaves (5th C)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
3ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ. 4ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ. 5ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ. 6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
ಪತ್ರಿಕೆ (ರೋಮಿನ ಸಂತ ಕ್ಸೇನಿಯಾ)
22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, 23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. 24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. 25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ. 26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ. 6:1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. 2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಸುವಾರ್ತೆ
10ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು. 11ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? 12ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು? 13ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು. 14ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು. 15ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 24 ಜನವರಿ ಎಂದರೆ ನಾಗರಿಕ ಪಂಚಾಂಗದ 6 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು