Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 8 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 26 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 8 ಫೆಬ್ರವರಿ 2027

ಸೋಮವಾರ · ಪಂಚಾಶತ್ತಮದ ನಂತರದ 37ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Venerable Xenophon with his wife Mary, and their sons Arcadius and John of Constantinople (5th-6th C)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಯಾಕೋ 2:14–26

14ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? 15ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, 16ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು? 17ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು. 18ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ. 19ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ. 20ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ? 21ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ? 22ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ. 23“ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು. 24ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ. 25ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ? 26ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.

ಸುವಾರ್ತೆ

ಮಾರ್ಕ 10:46–52

46ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು. 47ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು. 48ಅನೇಕರು, ಅವನಿಗೆ ಸುಮ್ಮನಿರು ಎಂದು ಗದರಿಸಲು ಅವನು, “ದಾವೀದನ ಕುಮಾರನೇ ನನ್ನನ್ನು ಕರುಣಿಸು” ಎಂದು ಮತ್ತಷ್ಟು ಕೂಗಿಕೊಂಡನು. 49ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು. 50ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು. 51ಯೇಸು ಅವನನ್ನು, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ” ಎಂದು ಕೇಳಲು ಆ ಕುರುಡನು, “ಗುರುವೇ, ನನಗೆ ಕಣ್ಣಿನ ದೃಷ್ಟಿ ಬರುವಂತೆ ಮಾಡಬೇಕು” ಅಂದನು. 52ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ” ಎಂದು ಹೇಳಿದನು. ಕೂಡಲೇ ಅವನಿಗೆ ಕಣ್ಣಿನ ದೃಷ್ಟಿ ಬಂದಿತು. ಅವನು ಆ ದಾರಿಯಲ್ಲಿ ಆತನನ್ನು ಹಿಂಬಾಲಿಸಿದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 26 ಜನವರಿ ಎಂದರೆ ನಾಗರಿಕ ಪಂಚಾಂಗದ 8 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು