Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 10 ಫೆಬ್ರವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 10 ಫೆಬ್ರವರಿ 2027

ಬುಧವಾರ · ತಪಸ್ಸು ಕಾಲ: ಬೂದಿ ಬುಧವಾರದ ನಂತರದ ದಿನಗಳು

ಹಬ್ಬಗಳು ಮತ್ತು ಸಂತರು

ಬೂದಿ ಬುಧವಾರ

ವಾರದ ದಿನ · ಆರಾಧನಾ ಬಣ್ಣ: ನೇರಳೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಉಪವಾಸ ಮತ್ತು ಮಾಂಸ ವರ್ಜನೆ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಯೋವೇ 2:12–18

12ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.” 13ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು. 14ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು. 15ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ. 16ಜನರನ್ನು ಒಟ್ಟುಗೂಡಿಸಿರಿ, ಪವಿತ್ರ ಸಭೆಯನ್ನು ಏರ್ಪಡಿಸಿರಿ. ಹಿರಿಯರನ್ನು ಕೂಡಿಸಿರಿ, ಮಕ್ಕಳನ್ನು ಸೇರಿಸಿರಿ, ಮೊಲೆಕೂಸುಗಳನ್ನು ಸೇರಿಸಿರಿ. ಮದುಮಗನು ತನ್ನ ಕೊಠಡಿಯಿಂದ ಹೊರಟುಬರಲಿ, ವಧುವು ತನ್ನ ಕಲ್ಯಾಣಗೃಹದಿಂದ ಹೊರಟುಬರಲಿ. 17ಯೆಹೋವನ ಸೇವಕರಾದ ಯಾಜಕರು, ದ್ವಾರಮಂಟಪಕ್ಕೂ, ಯಜ್ಞವೇದಿಯ ನಡುವೆ ಅಳುತ್ತಾ ಹೀಗೆ ಹೇಳಲಿ, “ಯೆಹೋವನೇ, ನಿನ್ನ ಜನರನ್ನು ಕರುಣಿಸು, ಅನ್ಯಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು.” 18ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ,

ಪ್ರತಿವಚನ ಕೀರ್ತನೆ

ಕೀರ್ತ 51:1–4, 10–12, 15

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. 2ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. 3ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. 4ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. 10ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು. 11ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ. 12ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು. 15ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.

ಎರಡನೆಯ ವಾಚನ

2 ಕೊರಿ 5:20–6:2

20ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. 21ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು. 6:1ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ. 2“ಸುಪ್ರಸನ್ನತೆಯ ಕಾಲದಲ್ಲಿ ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಿನಗೆ ಸಹಾಯ ಮಾಡಿದೆನು” ಎಂದು ದೇವರು ಹೇಳುತ್ತಾನಲ್ಲಾ. ನೋಡಿ, ಈಗಲೇ ಆ ಸುಪ್ರಸನ್ನತೆಯ ಕಾಲವು; ಇಂದೇ ಆ ರಕ್ಷಣೆಯ ದಿನ.

ಸುವಾರ್ತೆ

ಮತ್ತಾ 6:1–6, 16–18

1“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ. 2“ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 3ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ. 4ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 5“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 6ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು. 16“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 17ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ. 18ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು