ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 10 ಫೆಬ್ರವರಿ
ಆರ್ಥೊಡಾಕ್ಸ್ ಪಂಚಾಂಗ · ಜನವರಿ 28 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 10 ಫೆಬ್ರವರಿ 2027
ಬುಧವಾರ · ಪಂಚಾಶತ್ತಮದ ನಂತರದ 37ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Venerable Ephraim the Syrian († c. 373-379)
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
11ಒಂದೇ ಬುಗ್ಗೆಯಿಂದ ಸಿಹಿ ನೀರು ಮತ್ತು ಕಹಿ ನೀರು ಎರಡು ಹೊರಡುವುದುಂಟೇ? 12ನನ್ನ ಸಹೋದರರೇ, ಅಂಜೂರದ ಮರವು ಎಣ್ಣೆ ಮರದ ಕಾಯಿ ಬಿಡುವುದೋ? ದ್ರಾಕ್ಷಿ ಬಳ್ಳಿಯಲ್ಲಿ ಅಂಜೂರದ ಹಣ್ಣು ಬಿಡುವುದೋ? ಹಾಗೆಯೇ ಉಪ್ಪುನೀರಿನ ಬುಗ್ಗೆಯಿಂದ ಸಿಹಿ ನೀರು ಬರುವುದಿಲ್ಲ. 13ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ. 14ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. 15ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು. 16ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು. 17ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ. 18ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು. 4:1ನಿಮ್ಮಲ್ಲಿ ಜಗಳಗಳೂ, ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ದುರಾಶೆಗಳಿಂದ ಬರುತ್ತವಲ್ಲವೇ? 2ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ. 3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಾಭಿಲಾಷೆಗಳಿಗಾಗಿ ದುರುಪಯೋಗಪಡಿಸಿಕೊಳ್ಳಬೇಕೆಂಬ ದುರುದ್ದೇಶದಿಂದ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುತ್ತಿಲ್ಲ. 4ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ. 5ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ? 6ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.
ಸುವಾರ್ತೆ
23ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು. 24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ. 25ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು. 26ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 28 ಜನವರಿ ಎಂದರೆ ನಾಗರಿಕ ಪಂಚಾಂಗದ 10 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು