ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 11 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 11 ಫೆಬ್ರವರಿ 2027
ಗುರುವಾರ · ತಪಸ್ಸು ಕಾಲ: ಬೂದಿ ಬುಧವಾರದ ನಂತರದ ದಿನಗಳು
ಹಬ್ಬಗಳು ಮತ್ತು ಸಂತರು
ಬೂದಿ ಬುಧವಾರದ ನಂತರದ ಗುರುವಾರ
ಐಚ್ಛಿಕ ಸ್ಮರಣೆ · ಆರಾಧನಾ ಬಣ್ಣ: ನೇರಳೆ
ಲೂರ್ದಿನ ಮಾತೆ · ಸ್ಮರಣೋಲ್ಲೇಖ
ದಿನದ ವಾಚನಗಳು
ಮೊದಲನೆಯ ವಾಚನ
15“ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ. 16ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು. 17ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ, 18ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನ್ ನದಿಯನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಇರದೆ ನಾಶವಾಗಿಯೇ ಹೋಗುವಿರೆಂದು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ. 19ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ. 20ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ಮಾತಿಗೆ ವಿಧೇಯರಾಗಿರಿ, ಆತನನ್ನು ಹೊಂದಿಕೊಂಡೇ ಇರಿ. ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣ ಮಾಡಿಕೊಟ್ಟ ದೇಶದಲ್ಲಿ ನೀವು ಬದುಕಿಕೊಳ್ಳುವುದಕ್ಕೂ ಬಹುಕಾಲ ಇರುವುದಕ್ಕೂ ಆತನೇ ಆಧಾರ” ಎಂದು ಹೇಳಿದನು.
ಪ್ರತಿವಚನ ಕೀರ್ತನೆ
1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, 2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು. 3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. 4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ. 6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.
ಸುವಾರ್ತೆ
22ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು. 23ಇದಲ್ಲದೆ ಆತನು ಎಲ್ಲರಿಗೂ ಹೇಳಿದ್ದೇನಂದರೆ, “ಯಾವನಿಗಾದರೂ ನನ್ನ ಹಿಂದೆ ಬರುವುದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ತಾನು ನಿರಾಕರಿಸಿ ಪ್ರತಿದಿನವು ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ. 24ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು. 25ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ತಾನು ಹಾಳುಮಾಡಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು