Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 11 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಜನವರಿ 29 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 11 ಫೆಬ್ರವರಿ 2027

ಗುರುವಾರ · ಪಂಚಾಶತ್ತಮದ ನಂತರದ 37ನೇ ವಾರ · ಸ್ವರ 3

ಹಬ್ಬಗಳು ಮತ್ತು ಸಂತರು

Translation of the relics of the Hieromartyr Ignatius the God-bearer, Bishop of Antioch († 107)

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

ಯಾಕೋ 4:7–5:9

7ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು. 8ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. 9ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ. 10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು. 11ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ. 12ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು? 13“ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ. 14ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. 15ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು. 16ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ. 17ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ. 5:1ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ. 2ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. 3ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ. 4ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ. 5ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ. 6ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ. 7ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. 8ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು. 9ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.

ಪತ್ರಿಕೆ (ಶುಕ್ರವಾರಕ್ಕೆ)

1 ಪೇತ್ರ 1:1–2, 10–12; 2:6–10

1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ, 2ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. 10ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. 12ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. 2:6“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. 7ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು” 8ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ. 9ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ. 10ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.

ಸುವಾರ್ತೆ

ಮಾರ್ಕ 11:27–33

27ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು, 28“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಇದನ್ನು ಮಾಡುವುದಕ್ಕೆ ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಆತನನ್ನು ಕೇಳಿದರು. 29ಯೇಸು ಅವರಿಗೆ, “ನಾನೂ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ, ನನಗೆ ಉತ್ತರ ಹೇಳಿದರೆ ನಾನೂ ಸಹ ಯಾವ ಅಧಿಕಾರದಿಂದ ಇದನ್ನು ಮಾಡುತ್ತೇನೆಂಬುದನ್ನು ನಿಮಗೆ ಹೇಳುತ್ತೇನೆ. 30ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಉತ್ತರಕೊಡಿರಿ ಅಂದನು. 31ಆಗ ಅವರು, “‘ಪರಲೋಕದಿಂದ ಬಂದಿತೆಂದು’ ನಾವು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ’ ಅಂದಾನು; 32‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು. 33ಹೀಗಿರಲಾಗಿ ಅವರು, “ನಮಗೆ ಗೊತ್ತಿಲ್ಲ” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು ಅವರಿಗೆ, “ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ” ಅಂದನು.

ಸುವಾರ್ತೆ (ಶುಕ್ರವಾರಕ್ಕೆ)

ಮಾರ್ಕ 12:1–12

1ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು. 2ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು. 3ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು. 4ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು. 5ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು. 6ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. 7ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು, 8ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು. 9ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು. 10“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. 11ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು. 12ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 29 ಜನವರಿ ಎಂದರೆ ನಾಗರಿಕ ಪಂಚಾಂಗದ 11 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು