Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 12 ಫೆಬ್ರವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 12 ಫೆಬ್ರವರಿ 2027

ಶುಕ್ರವಾರ · ತಪಸ್ಸು ಕಾಲ: ಬೂದಿ ಬುಧವಾರದ ನಂತರದ ದಿನಗಳು

ಹಬ್ಬಗಳು ಮತ್ತು ಸಂತರು

ಬೂದಿ ಬುಧವಾರದ ನಂತರದ ಶುಕ್ರವಾರ

ವಾರದ ದಿನ · ಆರಾಧನಾ ಬಣ್ಣ: ನೇರಳೆ

ಉಪವಾಸ ಮತ್ತು ಪ್ರಾಯಶ್ಚಿತ್ತ

ಮಾಂಸ ವರ್ಜನೆ

ಪ್ರತಿ ಶುಕ್ರವಾರವೂ ಪ್ರಾಯಶ್ಚಿತ್ತದ ದಿನ; ಅದನ್ನು ಹೇಗೆ ಆಚರಿಸಬೇಕು ಎಂಬುದನ್ನು ಪ್ರತಿಯೊಂದು ಬಿಷಪರ ಸಮ್ಮೇಳನ ನಿರ್ಧರಿಸುತ್ತದೆ: ಮಾಂಸ ವರ್ಜನೆ ಅಥವಾ ಬೇರೊಂದು ಪ್ರಾಯಶ್ಚಿತ್ತ ಕಾರ್ಯ. ಉಪವಾಸ 18 ರಿಂದ 59 ವರ್ಷದವರಿಗೆ, ಮಾಂಸ ವರ್ಜನೆ 14 ವರ್ಷದಿಂದ ಕಡ್ಡಾಯ.

ದಿನದ ವಾಚನಗಳು

ಮೊದಲನೆಯ ವಾಚನ

ಯೆಶಾ 58:1–9

1ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು. 2ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ. 3“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ. 4ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ. 5ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ? 6ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು, 7ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ. 8ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು. 9ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,

ಪ್ರತಿವಚನ ಕೀರ್ತನೆ

ಕೀರ್ತ 51:1–4, 16–17

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ. ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು. 2ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು. 3ನಾನು ದ್ರೋಹಿ ಎಂದು ನಾನೇ ಒಪ್ಪಿಕೊಂಡಿದ್ದೇನೆ; ನನ್ನ ಪಾಪವು ಯಾವಾಗಲೂ ನನ್ನ ಮುಂದೆ ಇದೆ. 4ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ. 16ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ. 17ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.

ಸುವಾರ್ತೆ

ಮತ್ತಾ 9:14–15

14ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, 15“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು