ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 13 ಫೆಬ್ರವರಿ
ಆರ್ಥೊಡಾಕ್ಸ್ ಪಂಚಾಂಗ · ಜನವರಿ 31 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 13 ಫೆಬ್ರವರಿ 2027
ಶನಿವಾರ · ಪಂಚಾಶತ್ತಮದ ನಂತರದ 37ನೇ ವಾರ · ಸ್ವರ 3
ಹಬ್ಬಗಳು ಮತ್ತು ಸಂತರು
Holy Wonderworkers and Unmercenary Martyrs Cyrus and John, and together with them the Martyr Athanasia and her daughters: Theodota, Theoctista and Eudoxia at Canopus in Egypt († 311)
ಉಪವಾಸ
ಉಪವಾಸವಿಲ್ಲ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
14ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ. 15ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ. 16ಯಾವಾಗಲೂ ಸಂತೋಷಿಸಿರಿ, 17ಎಡೆಬಿಡದೆ ಪ್ರಾರ್ಥನೆಮಾಡಿರಿ, 18ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ. 19ಪವಿತ್ರಾತ್ಮನನ್ನು ನಂದಿಸಬೇಡಿ, 20ಪ್ರವಾದನೆಗಳನ್ನು ಹಿನೈಸಬೇಡಿರಿ. 21ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. 22ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ. 23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.
ಪತ್ರಿಕೆ (ಸಂತರಾದ ಕೈರಸ್ ಮತ್ತು ಯೋಹಾನ)
27ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ. 28ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ. 29ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ? 30ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ? 31ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ. 13:1ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ. 2ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ. 3ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು. 4ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. 5ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. 6ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. 7ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ. 8ಪ್ರೀತಿಯು ಎಂದಿಗೂ ನಿಂತುಹೋಗುವುದಿಲ್ಲ. ಪ್ರವಾದನೆಗಳಾದರೂ ಇಲ್ಲದಂತಾಗುವವು. ಅನ್ಯಭಾಷೆಗಳೋ ನಿಂತುಹೋಗುವವು. ತಿಳಿವಳಿಕೆಯೋ ಇಲ್ಲದಂತಾಗುವುದು.
ಸುವಾರ್ತೆ
3ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. 4ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು. 5ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು, 6ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು. 7“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ? 8ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ. 9ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ. 10ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
ಸುವಾರ್ತೆ (ಸಂತರಾದ ಕೈರಸ್ ಮತ್ತು ಯೋಹಾನ)
1ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು. 5ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ; 6ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ. 7‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ. 8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 31 ಜನವರಿ ಎಂದರೆ ನಾಗರಿಕ ಪಂಚಾಂಗದ 13 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು