Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 15 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 2 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 15 ಫೆಬ್ರವರಿ 2027

ಸೋಮವಾರ · ಪಂಚಾಶತ್ತಮದ ನಂತರದ 38ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

On this day we observe the Meeting of our Lord, God, and Saviour Jesus Christ

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ವಿಮೋ 12; ವಿಮೋ 13; ಅರಣ್ಯ 8; ಯಾಜ 12 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ

ಯೆಶಾ 6:1–12

1ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು. 2ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. 3ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. 4ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು. 5ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು, 6ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು, 7ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು. 8ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು. 9ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ, ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ, 10ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ, ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು. 11ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು. 12ಯೆಹೋವನು ಮನುಷ್ಯರನ್ನು ದೂರಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗೆ ಇರುವುದು.

ಸಂಧ್ಯಾ ಪ್ರಾರ್ಥನೆ: ವಾಚನ

ಯೆಶಾ 19:1, 3–5, 12, 16, 19–21

1ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು. 3ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು. 4ಇದಲ್ಲದೆ ಐಗುಪ್ತ್ಯರನ್ನು ಕ್ರೂರವಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನು ಆಳುವನು” ಎಂದು ಸೇನಾಧೀಶ್ವರನಾದ ಯೆಹೋವನು ನುಡಿಯುತ್ತಾನೆ. 5ಮಹಾನದಿಯ ನೀರು ಬತ್ತಿಹೋಗುವುದು. ನದಿಗಳ ತೀರಗಳು ಇಂಗಿ ಒಣಗುವುದು. 12ನಿನ್ನ ಜ್ಞಾನಿಗಳು ಎಲ್ಲಿ?” ಎಂದು ಅವರು ನಿನಗೆ ತಿಳಿ ಹೇಳಲಿ. ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ಅರಿತುಕೊಳ್ಳಲಿ. 16ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು. 19ಅ ದಿನದಲ್ಲಿ ಐಗುಪ್ತ ದೇಶದ ಮಧ್ಯದಲ್ಲಿ ಯೆಹೋವನಿಗೆ ಒಂದು ಯಜ್ಞಪೀಠವು, ದೇಶದ ಮೇರೆಯಲ್ಲಿ ಯೆಹೋವನಿಗೆ ಒಂದು ಸ್ತಂಭವೂ ಇರುವುದು. 20ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು. 21ಯೆಹೋವನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವನನ್ನು ತಿಳಿದುಕೊಳ್ಳುವರು ಮತ್ತು ಯಜ್ಞನೈವೇದ್ಯಗಳಿಂದ ಸೇವೆ ಮಾಡುವರು. ಹೌದು, ಯೆಹೋವನಿಗೆ ಪ್ರಮಾಣ ಮಾಡಿಕೊಂಡು ಅದನ್ನು ನೆರವೇರಿಸುವರು.

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಲೂಕ 2:25–32

25ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು. 26ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು. 27ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು, 28ಸಿಮೆಯೋನನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ, 29“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು. 30ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು. 32ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.

ಪತ್ರಿಕೆ (ಕರ್ತನನ್ನು ಎದುರುಗೊಂಡದ್ದು)

ಇಬ್ರಿ 7:7–17

7ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ಹೆಚ್ಚಿನವನು ಎಂಬುದನ್ನು ನಿರಾಕರಿಸುವಂತಿಲ್ಲ. 8ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು. 9ಮತ್ತು ದಶಮ ಭಾಗಗಳನ್ನು ತೆಗೆದುಕೊಳ್ಳುವ ಲೇವಿಯು ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿತು. 10ಹೇಗೆಂದರೆ, ಮೆಲ್ಕಿಜೆದೇಕನು ಲೇವಿಯ ಮೂಲಪುರುಷನಾದ ಅಬ್ರಹಾಮನನ್ನು ಸಂಧಿಸಿದಾಗ ಲೇವಿಯು ತತ್ವರೂಪವಾಗಿ ಅಬ್ರಹಾಮನ ದೇಹದಲ್ಲಿದ್ದನು. 11ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು? 12ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ. 13ಆದರೆ ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ. 14ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ. 15ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ. 17ಆತನ ವಿಷಯದಲ್ಲಿ “ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ.

ಸುವಾರ್ತೆ (ಕರ್ತನನ್ನು ಎದುರುಗೊಂಡದ್ದು)

ಲೂಕ 2:22–40

22ಮೋಶೆಯ ಧರ್ಮಶಾಸ್ತ್ರದ ಪ್ರಕಾರ ಅವರ ಶುದ್ಧೀಕರಣದ ದಿನಗಳು ಮುಗಿದ ಮೇಲೆ, “ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವುದು” ಎಂದು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, ಅವರು ಆ ಕೂಸನ್ನು ಕರ್ತನಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತೆಗೆದುಕೊಂಡು ಹೋದರು. 24ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು. 25ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು. 26ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ನೀನು ಸಾಯುವುದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು. 27ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು, 28ಸಿಮೆಯೋನನು ಆ ಮಗುವನ್ನು ತನ್ನ ಕೈಯಲ್ಲಿ ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ, 29“ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು. 30ನೀನು ಎಲ್ಲಾ ಜನರ ಸಮ್ಮುಖದಲ್ಲಿ ಸಿದ್ಧಪಡಿಸಿದ ಆ ರಕ್ಷಣೆಯನ್ನು ನಾನು ಕಣ್ಣಾರೆ ಕಂಡೆನು. 32ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು. 33ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು, 34ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು; 35ಹೀಗೆ ಬಹುಜನರ ಹೃದಯದ ಆಲೋಚನೆಗಳು ಬಹಿರಂಗವಾಗುವವು; ಈ ಕಾರಣಕ್ಕಾಗಿ ಈತನು ಹುಟ್ಟಿದ್ದು. ಇದಲ್ಲದೆ ನಿನ್ನ ಸ್ವಂತ ಮನಸ್ಸಿಗಂತೂ ಅಲಗು ನಾಟಿದಂತೆ ವೇದನೆ ಉಂಟಾಗುತ್ತದೆ” ಎಂದು ಹೇಳಿದನು. 36ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು, 37ಅವಳು ಎಂಭತ್ತುನಾಲ್ಕು ವರ್ಷದವಳಾಗಿದ್ದಳು. ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿ ಹಗಲೂ ದೇವರನ್ನು ಆರಾಧಿಸುತ್ತಿದ್ದಳು. 38ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು. 39ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು. 40ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 2 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 15 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು