ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 16 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 16 ಫೆಬ್ರವರಿ 2027
ಮಂಗಳವಾರ · ತಪಸ್ಸು ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಮೊದಲನೆಯ ವಾರದ ಮಂಗಳವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
10ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, 11ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
ಪ್ರತಿವಚನ ಕೀರ್ತನೆ
3ನನ್ನೊಡನೆ ಯೆಹೋವನನ್ನು ಕೊಂಡಾಡಿರಿ; ನಾವು ಒಟ್ಟಾಗಿ ಆತನ ಹೆಸರನ್ನು ಘನಪಡಿಸೋಣ. 4ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. 5ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ. 6ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು. 15ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ. 16ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು. 17ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ. 18ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
ಸುವಾರ್ತೆ
7ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ. 8ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ. 9ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು, 10“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. 11ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು. 12ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು. 13ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು 14ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. 15ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು