Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 17 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 4 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 17 ಫೆಬ್ರವರಿ 2027

ಬುಧವಾರ · ಪಂಚಾಶತ್ತಮದ ನಂತರದ 38ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Afterfeast of the Meeting of the Lord

ಉಪವಾಸದ ದಿನ

ಮೀನಿಗೆ ಅನುಮತಿ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

1 ಪೇತ್ರ 4:1–11

1ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ. 2ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. 3ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು. 4ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. 5ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು. 6ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. 7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ. 8ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ. 9ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. 10ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ. 11ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.

ಸುವಾರ್ತೆ

ಮಾರ್ಕ 12:28–37

28ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು. 29ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನು ಒಬ್ಬನೇ ದೇವರು. 30ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ. 31‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು. 32ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು. 33ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು. 34ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ. 35ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ? 36“‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ. 37ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 4 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 17 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು