ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 18 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 18 ಫೆಬ್ರವರಿ 2027
ಗುರುವಾರ · ತಪಸ್ಸು ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಮೊದಲನೆಯ ವಾರದ ಗುರುವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
ಈ ಅನುವಾದದಲ್ಲಿ ಇಲ್ಲ
ಪ್ರತಿವಚನ ಕೀರ್ತನೆ
1ದಾವೀದನ ಕೀರ್ತನೆ. ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು. 2ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. 3ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ; ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ. 7ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ, ನನ್ನನ್ನು ಚೈತನ್ಯಗೊಳ್ಳಿಸುವಿ, ನನ್ನ ಶತ್ರುಗಳ ಕೋಪಕ್ಕೆ ವಿರುದ್ಧವಾಗಿ ನಿನ್ನ ಕೈ ಚಾಚುವಿ, ನಿನ್ನ ಬಲಗೈ ನನ್ನನ್ನು ರಕ್ಷಿಸುವುದು. 8ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು, ನೀನು ಕೈಹಾಕಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.
ಸುವಾರ್ತೆ
7“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; 8ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. 9“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ? 10ಮೀನು ಕೇಳಿದರೆ ಹಾವನ್ನು ಕೊಡುವನೋ? 11ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ? 12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು