Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 18 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 5 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 18 ಫೆಬ್ರವರಿ 2027

ಗುರುವಾರ · ಪಂಚಾಶತ್ತಮದ ನಂತರದ 38ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Afterfeast of the Meeting of the Lord

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 10; ಜ್ಞಾನೋ 3; ಜ್ಞಾನೋ 8 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ

ಜ್ಞಾನೋ 10 (ಆರಿಸಿದ ವಚನಗಳು)

ಸಂಧ್ಯಾ ಪ್ರಾರ್ಥನೆ: ವಾಚನ

ಈ ಅನುವಾದದಲ್ಲಿ ಇಲ್ಲ

ಉದಯಕಾಲದ ಪ್ರಾರ್ಥನೆ: ಸುವಾರ್ತೆ

ಯೋಹಾ 10:9–16

9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು. 10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು. 11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ. 12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ. 13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ. 14ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು. 15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ. 16ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.

ಪತ್ರಿಕೆ

1 ಪೇತ್ರ 4:12–5:5

12ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ. 13ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ 14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ. 15ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು. 16ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ. 17ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು? 18ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ? 19ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ. 5:1ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ, 2ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ. 3ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. 4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ. 5ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”

ಪತ್ರಿಕೆ (ಸಂತ ಥಿಯೊಡೋಸಿಯಸ್)

ಇಬ್ರಿ 13:17–21

17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. 18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ. 19ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ. 20ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ಸುವಾರ್ತೆ

ಮಾರ್ಕ 12:38–44

38ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ, 39ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ. 40ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು. 41ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು. 42ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು. 43ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. 44ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.

ಸುವಾರ್ತೆ (ಸಂತ ಥಿಯೊಡೋಸಿಯಸ್)

ಲೂಕ 6:17–23

17ಆ ಮೇಲೆ ಯೇಸು ಅವರೊಂದಿಗೆ ಬೆಟ್ಟದಿಂದ ಇಳಿದು ಸಮಭೂಮಿಯಲ್ಲಿ ಬಂದು ನಿಂತನು. ಆತನ ಶಿಷ್ಯರ ದೊಡ್ಡಗುಂಪು ಮತ್ತು ಎಲ್ಲಾ ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ತೂರ್, ಸೀದೋನ್ ಪಟ್ಟಣಗಳ ಕರಾವಳಿತೀರದಿಂದಲೂ ಬಂದಿದ್ದ ಜನರ ಮಹಾಸಮೂಹವು ಆತನ ಸಂಗಡ ಇದ್ದಿತು. 18ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. 19ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. 20ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. 21ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ. 22“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. 23ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 5 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 18 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು