ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 19 ಫೆಬ್ರವರಿ
ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 6 (ಹಳೆಯ ಪದ್ಧತಿ)
ಆರ್ಥೊಡಾಕ್ಸ್ ದೈನಂದಿನ ವಾಚನಗಳು — 19 ಫೆಬ್ರವರಿ 2027
ಶುಕ್ರವಾರ · ಪಂಚಾಶತ್ತಮದ ನಂತರದ 38ನೇ ವಾರ · ಸ್ವರ 4
ಹಬ್ಬಗಳು ಮತ್ತು ಸಂತರು
Afterfeast of the Meeting of the Lord
ಉಪವಾಸದ ದಿನ
ಮೀನಿಗೆ ಅನುಮತಿ
ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.
ದಿನದ ವಾಚನಗಳು
ಪತ್ರಿಕೆ
1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ, 2ದೇವರನ್ನು ಕುರಿತಾಗಿಯೂ, ನಮ್ಮ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿಯೂ ಇರುವ ಪರಿಜ್ಞಾನದಲ್ಲಿ ನಿಮಗೆ ಕೃಪೆಯೂ, ಶಾಂತಿಯೂ ಹೆಚ್ಚುಹೆಚ್ಚಾಗಿ ದೊರೆಯಲಿ. 3ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು. 4ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ. 5ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, 6ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ, 7ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ. 8ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ. 9ಇವುಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರ ದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. 10ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.
ಸುವಾರ್ತೆ
1ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು. 2ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು. 3ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ, 4ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು. 5ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ. 6ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು. 7ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ. 8ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 6 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 19 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು