ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 20 ಫೆಬ್ರವರಿ
ಕ್ಯಾಥೊಲಿಕ್ ಪಂಚಾಂಗ
ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 20 ಫೆಬ್ರವರಿ 2027
ಶನಿವಾರ · ತಪಸ್ಸು ಕಾಲದ ಮೊದಲನೆಯ ವಾರ
ಹಬ್ಬಗಳು ಮತ್ತು ಸಂತರು
ತಪಸ್ಸು ಕಾಲದ ಮೊದಲನೆಯ ವಾರದ ಶನಿವಾರ
ವಾರದ ದಿನ · ಆರಾಧನಾ ಬಣ್ಣ: ನೇರಳೆ
ದಿನದ ವಾಚನಗಳು
ಮೊದಲನೆಯ ವಾಚನ
16ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನಿಮಗೆ ಈಗ ಆಜ್ಞಾಪಿಸಿದ್ದಾನೆ. ಆದುದರಿಂದ ನೀವು ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು. 17ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ. 18ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ 19ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.
ಪ್ರತಿವಚನ ಕೀರ್ತನೆ
1ಯೆಹೋವನ ಧರ್ಮಶಾಸ್ತ್ರವನ್ನು ಅನುಸರಿಸಿ, ಸದಾಚಾರಿಗಳಾಗಿ ನಡೆಯುವವರು ಧನ್ಯರು. 2ಆತನ ಕಟ್ಟಳೆಗಳನ್ನು ಕೈಕೊಂಡು, ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು. 4ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ. 5ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವುದರಲ್ಲಿ, ನಾನು ಸ್ಥಿರಮನಸ್ಸುಳ್ಳವನಾಗಿದ್ದರೆ ಒಳ್ಳೇಯದು! 7ನಾನು ನಿನ್ನ ನೀತಿಯ ವಿಧಿಗಳನ್ನು ಕಲಿತ ಹಾಗೆಲ್ಲಾ, ನಿನ್ನನ್ನು ಯಥಾರ್ಥ ಹೃದಯದಿಂದ ಕೊಂಡಾಡುತ್ತಾ ಹೋಗುವೆನು. 8ನಿನ್ನ ಕಟ್ಟಳೆಗಳನ್ನು ಅನುಸರಿಸುವ ನನ್ನನ್ನು, ಸಂಪೂರ್ಣವಾಗಿ ಕೈಬಿಡಬೇಡ.
ಸುವಾರ್ತೆ
43“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ. 44ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ. 45ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ. 46ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ. 47ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ. 48ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.
ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು