Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 20 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 7 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 20 ಫೆಬ್ರವರಿ 2027

ಶನಿವಾರ · ಪಂಚಾಶತ್ತಮದ ನಂತರದ 38ನೇ ವಾರ · ಸ್ವರ 4

ಹಬ್ಬಗಳು ಮತ್ತು ಸಂತರು

Afterfeast of the Meeting of the Lord

ಉಪವಾಸ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ತಿಮೊ 2:11–19

11ಈ ಮಾತು ನಂಬತಕ್ಕದ್ದಾಗಿದೆ, ಅದೇನೆಂದರೆ “ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ಜೀವಿಸುವೆವು, 12ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು. 13ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.” 14ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು. 15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು. 16ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು. 17ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ. 18ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ. 19ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

ಸುವಾರ್ತೆ

ಲೂಕ 18:2–8

2ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. 3ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು. 4ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ, 5ಆದರೂ ಈ ವಿಧವೆ ನನ್ನನ್ನು ಕಾಡುತ್ತಾ ಬರುತ್ತಿರುವುದರಿಂದ ಈಕೆಯ ನ್ಯಾಯವನ್ನು ವಿಚಾರಿಸಿ ತೀರ್ಪುಮಾಡುವೆನು. ಇಲ್ಲವಾದರೆ ಈಕೆ ಪದೇಪದೇ ಬಂದು ನನ್ನನ್ನು ದಣಿಸಾಳು’ ಎಂದು ತನ್ನೊಳಗೆ ಅಂದುಕೊಂಡನು.” 6ಕರ್ತನು ಈ ಸಾಮ್ಯವನ್ನು ಹೇಳಿದ ಮೇಲೆ, “ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ. 7ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? 8ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 7 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 20 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು