Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 22 ಫೆಬ್ರವರಿ

ಕ್ಯಾಥೊಲಿಕ್ ಪಂಚಾಂಗ

ದೈನಂದಿನ ಬೈಬಲ್ ವಾಚನಗಳು (ಕಥೋಲಿಕ) — 22 ಫೆಬ್ರವರಿ 2027

ಸೋಮವಾರ · ತಪಸ್ಸು ಕಾಲದ ಎರಡನೆಯ ವಾರ

ಹಬ್ಬಗಳು ಮತ್ತು ಸಂತರು

ಅಪೊಸ್ತಲ ಸಂತ ಪೇತ್ರನ ಪೀಠ

ಹಬ್ಬ · ಆರಾಧನಾ ಬಣ್ಣ: ಬಿಳಿ

ದಿನದ ವಾಚನಗಳು

ಮೊದಲನೆಯ ವಾಚನ

1 ಪೇತ್ರ 5:1–4

1ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ, 2ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ. 3ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. 4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.

ಪ್ರತಿವಚನ ಕೀರ್ತನೆ

ಕೀರ್ತ 23:1–6

1ದಾವೀದನ ಕೀರ್ತನೆ. ಯೆಹೋವನು ನನಗೆ ಕುರುಬನು; ಕೊರತೆಪಡೆನು. 2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ. 3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ. 4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ. 5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. 6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.

ಸುವಾರ್ತೆ

ಮತ್ತಾ 16:13–19

13ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು. 14ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು. 15ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?” 16ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು. 17ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು. 18ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. 19ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.

ಇಂದಿನ ಸಂತರು

ಸಾಮಾನ್ಯ ರೋಮನ್ ಪಂಚಾಂಗ; ಬಿಷಪರ ಸಮ್ಮೇಳನವು ಕೆಲವು ಹಬ್ಬಗಳನ್ನು (ಪ್ರಭುವಿನ ಪ್ರಕಟನೆ, ಸ್ವರ್ಗಾರೋಹಣ, ಕ್ರಿಸ್ತನ ದೇಹ ಮತ್ತು ರಕ್ತ) ಭಾನುವಾರಕ್ಕೆ ಸರಿಸಬಹುದು ಅಥವಾ ತನ್ನದೇ ಹಬ್ಬಗಳನ್ನು ಸೇರಿಸಬಹುದು. ವಾಚನ ಸಂಗ್ರಹ: ಭಾನುವಾರದ ಚಕ್ರ B, ವಾರದ ದಿನಗಳ ವರ್ಷ I.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು