Bible Explorer ಆ್ಯಪ್ ಪಡೆಯಿರಿ

ಮುಖಪುಟ › ದೈನಂದಿನ ಬೈಬಲ್ ವಾಚನಗಳು › ಫೆಬ್ರವರಿ 2027 › 22 ಫೆಬ್ರವರಿ

ಆರ್ಥೊಡಾಕ್ಸ್ ಪಂಚಾಂಗ · ಫೆಬ್ರವರಿ 9 (ಹಳೆಯ ಪದ್ಧತಿ)

ಆರ್ಥೊಡಾಕ್ಸ್ ದೈನಂದಿನ ವಾಚನಗಳು — 22 ಫೆಬ್ರವರಿ 2027

ಸೋಮವಾರ · ಸುಂಕದವನ ಮತ್ತು ಫರಿಸಾಯನ ವಾರ · ಸ್ವರ 5

ಹಬ್ಬಗಳು ಮತ್ತು ಸಂತರು

Apodosis of the Meeting of the Lord

ಉಪವಾಸವಿಲ್ಲದ ವಾರ

ಉಪವಾಸವಿಲ್ಲ

ಇದು ಮಠದ ನಿಯಮವನ್ನು ಅನುಸರಿಸುತ್ತದೆ. ಸಭೆಯಲ್ಲಿ ಉಪವಾಸದ ಪ್ರಮಾಣವನ್ನು ಆರೋಗ್ಯ, ವಯಸ್ಸು ಮತ್ತು ಸಂದರ್ಭಗಳಿಗೆ ಅನುಗುಣವಾಗಿ ಪಾಪನಿವೇದನೆಯ ಗುರುವಿನೊಂದಿಗೆ ಸೇರಿ ನಿರ್ಧರಿಸಲಾಗುತ್ತದೆ.

ದಿನದ ವಾಚನಗಳು

ಪತ್ರಿಕೆ

2 ಪೇತ್ರ 1:20–2:9

20ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. 21ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು. 2:1ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. 2ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. 3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ. 4ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು. 5ಆತನು ಭಕ್ತಿಹೀನರಾದ ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಳಯವನ್ನು ಬರಮಾಡಿದನು. ಆದರೆ ಸುನೀತಿಯನ್ನು ಸಾರುತ್ತಿದ್ದ ನೋಹನನ್ನೂ ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಉಳಿಸಿದನು. 6ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು. 7ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು. 8ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ಬಹಳವಾಗಿ ನೊಂದುಕೊಂಡನು. 9ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

ಸುವಾರ್ತೆ

ಮಾರ್ಕ 13:9–13

9“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು, 10ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು. 11“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು, 12ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು, 13ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”

ದಿನಾಂಕಗಳು ರಷ್ಯನ್ ಸಭೆಯ ಜೂಲಿಯನ್ ಪಂಚಾಂಗದ ಪ್ರಕಾರ ಇವೆ (ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತದಂತೆ): ಸಭೆಯ ಪಂಚಾಂಗದ 9 ಫೆಬ್ರವರಿ ಎಂದರೆ ನಾಗರಿಕ ಪಂಚಾಂಗದ 22 ಫೆಬ್ರವರಿ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ, ಉಕ್ರೇನ್…) ನಿಗದಿತ ದಿನಾಂಕದ ಹಬ್ಬಗಳನ್ನೂ ಸಂತರನ್ನೂ ಅದೇ ನಾಗರಿಕ ದಿನಾಂಕದಂದು, 13 ದಿನಗಳ ಮುಂಚೆ, ಆಚರಿಸುತ್ತವೆ, ಮತ್ತು ಅವುಗಳ ಕೆಲವು ವಾಚನಗಳು ಬೇರೆಯಾಗಿವೆ; ಈಸ್ಟರ್ ಮತ್ತು ಅದನ್ನು ಅವಲಂಬಿಸಿರುವ ದಿನಗಳು ಒಂದೇ ಆಗಿವೆ.

ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು